ಮಡಿಕೇರಿ: ಇಲ್ಲಿನ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು ಚುನಾವಣಾ ಆಯೋಗಕ್ಕೆ ತಮ್ಮ ವಯಸ್ಸಿನ ಕುರಿತು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಪಿ.ಬಿ.ತಿಮ್ಮಯ್ಯ ಎಂಬುವವರು ವಿರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಬೋಪಯ್ಯ ಅವರು ಬಾರ್ ಕೌನ್ಸಿಲ್‌ನಲ್ಲಿ ತಮ್ಮ ಜನ್ಮ ದಿನಾಂಕವನ್ನು 17–10–1951 ಎಂದು ದಾಖಲಿಸಿದ್ದಾರೆ. ಅದರಂತೆ 2004ನೇ ಸಾಲಿನ ಚುನಾವಣೆ ಸಮಯದಲ್ಲಿ ಅವರ ವಯಸ್ಸು 53 ವರ್ಷ ಆಗಿತ್ತು. ಆದರೆ, ಬೋಪಯ್ಯ ತಮ್ಮ ವಯಸ್ಸನ್ನು 49 ವರ್ಷ ಎಂದು ಆಯೋಗಕ್ಕೆ ಸಲ್ಲಿಸಿದ್ದಾರೆ. 2013ನೇ ಸಾಲಿನ ಚುನಾವಣೆಯಲ್ಲಿ ಅವರ ವಯಸ್ಸು 61 ವರ್ಷ ಆಗಿದ್ದರೂ ಚುನಾವಣೆ ಆಯೋಗಕ್ಕೆ 58 ವರ್ಷ ಎಂದು, 2018ನೇ ಸಾಲಿನ ಚುನಾವಣೆಯಲ್ಲಿ 67 ವರ್ಷವಾಗಿದ್ದರೂ, ತಮ್ಮ ವಯಸ್ಸನ್ನು 65 ಎಂದು ಚುನಾವಣೆ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ’ ಎಂದು ದೂರುದಾರ ಪಿ.ಬಿ.ತಿಮ್ಮಯ್ಯ ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಚುನಾವಣಾ ಆಯೋಗ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಲೋಕಾಯುಕ್ತಕ್ಕೂ ದೂರು ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಶಾಸಕ ಕೆ.ಜಿ.ಬೋಪಯ್ಯ, ‘ಆರೋಪ ಸತ್ಯಕ್ಕೆ ದೂರ. ಪ್ರತಿ ಬಾರಿ ಚುನಾವಣೆ ಬಂದಾಗಲೂ ನನ್ನ ವಿರುದ್ಧ ಸಣ್ಣ ಗುಂಪೊಂದು ಆಧಾರರಹಿತ ಆರೋಪಗಳನ್ನು ಮಾಡುತ್ತಲೇ ಇರುತ್ತದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.