ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರವೂ ಬಿರುಗಾಳಿ ಸಹಿತ ಮುಂದುವರಿದಿದೆ. ಬೀಸುತ್ತಿರುವ ಬಿರುಗಾಳಿಗೆ ಮರಗಳು, ವಿದ್ಯುತ್ ಕಂಬಗಳು ಎಲ್ಲೆಂದರಲ್ಲಿ ತರಗಲೆಗಳಂತೆ ಬೀಳುತ್ತಿವೆ. ಇದು ಸೆಸ್ಕ್ ಸಿಬ್ಬಂದಿಯ ಕಾರ್ಯನಿರ್ವಹಣೆಗೆ ತೊಡಕಾಗಿ ಪರಿಣಮಿಸಿದೆ. ಇದರಿಂದ ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯ ಬಹುಭಾಗಕ್ಕೆ ವಿದ್ಯುತ್ ಪೂರೈಕೆ ರಾತ್ರಿಯಿಂದ ಸ್ಥಗಿತಗೊಂಡಿದೆ.

ಐಗೂರು ಹೊಸತೋಟದ ನಡುವೆ ಮರ ಬಿದ್ದು ಸಾರಿಗೆ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಮರ ತೆರವು ಕಾರ್ಯ ನಡೆಯುತ್ತಿದೆ.

ಭಾಗಮಂಡಲದ ಭಗಂಡೇಶ್ವರ ದೇಗುಲದ ಮುಂದಿನ ಉದ್ಯಾನ ನದಿ ನೀರಿನಲ್ಲಿ ಮತ್ತೊಮ್ಮೆ ಮುಳುಗಿದೆ.

ಸುಂಟಿಕೊಪ್ಪ ಸಮೀಪದ ಅಂದಗೋವೆ- ಕಲ್ಲೂರು ಮಾರ್ಗದಲ್ಲಿ, ಕೊಟ್ಟಗೇರಿ- ಪೂಕೊಳ ನಡುವಿನ ರಸ್ತೆಯಲ್ಲಿ ಮರ ಬಿದ್ದು ಸಂಚಾರ ಬಂದ್ ಆಗಿದೆ.

ನಿರಂತರವಾಗಿ ಭಾರಿ ಸ್ವರೂಪದಲ್ಲಿ ಬೀಳುತ್ತಿರುವ ಮಳೆ ಹಾಗೂ ಬಿರುಗಾಳಿಯಿಂದಾಗಿ ಜುಲೈ 27 ರಂದು ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.