ಕುಶಾಲನಗರ: ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಕೂಡಿಗೆ ಕ್ರೀಡಾ ಶಾಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಕ್ರೀಡಾಕೂಟ ಉದ್ಘಾಟಿಸಿದ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ‘ಕ್ರೀಡಾಕೂಟ ಸಾಮರಸ್ಯ, ಬಾಂಧವ್ಯದ ಸಂಕೇತ. ಹಬ್ಬ, ಹರಿದಿನಗಳಂತೆ ಕ್ರೀಡಾಕೂಟಗಳು ಸಂಭ್ರಮದ ಸಂಕೇತ. ಯುವ ಸಮೂಹ ಕ್ರೀಡಾಸ್ಫೂರ್ತಿಯೊಂದಿಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕಿದೆ. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಜವಾಬ್ದಾರಿ ಮೆರೆಯಬೇಕಿದೆ’ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಚಕ್ರವರ್ತಿ ಮಾತನಾಡಿ, ದಸರಾ ಕ್ರೀಡಾಕೂಟದ ಉದ್ದೇಶ ಹಾಗೂ ಸ್ವರೂಪದ ಬಗ್ಗೆ ಮಾಹಿತಿ ಒದಗಿಸಿದರು.

ಈ ಸಂದರ್ಭ ಕ್ರೀಡಾ ಶಾಲೆಯ ಪ್ರಾಂಶುಪಾಲ ದೇವ್ ಕುಮಾರ್, ವಿವಿಧ ಕ್ರೀಡಾ ವಿಭಾಗದ ತರಬೇತುದಾರರು, ಮತ್ತು ತಾಲ್ಲೂಕು ಮಟ್ಟದ ವಿಜೇತ ಕ್ರೀಡಾ ಪಟುಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.