ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹತ್ತಿರದ ವಯನಾಡು ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಪ್ರಾಣಹಾನಿ ಹಾಗೂ ಸಾಕಷ್ಟು ನಷ್ಟ ಉಂಟಾಗಿದೆ. ಆದ್ದರಿಂದ ಜನ ಜಾನುವಾರು ರಕ್ಷಣೆಗೆ ಮುಂದಾಗಬೇಕು. ಸೋಮವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಸುರಕ್ಷಿತ ಸ್ಥಳ/ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಪ್ರವಾಹ ಮತ್ತು ಭೂಕುಸಿತ ಪ್ರದೇಶದಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ, ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವ ಜೊತೆಗೆ ಕಾಳಜಿ ಕೇಂದ್ರದಲ್ಲಿ ಅಗತ್ಯ ಮೂಲಸೌಲಭ್ಯ ಒದಗಿಸುವಂತೆಯೂ ಅವರು ಹೇಳಿದರು.

ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಅರಣ್ಯ, ಅಗ್ನಿಶಾಮಕ, ಸೆಸ್ಕ್, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ವಿಭಾಗ ಹೀಗೆ ಪ್ರತೀ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಸೂಕ್ಷ್ಮ ಪ್ರದೇಶದ ಜನರನ್ನು ಸ್ಥಳಾಂತರಿಸಬೇಕು ಎಂದು ಹೇಳಿದರು.

ಭಾರತೀಯ ಹವಾಮಾನ ಇಲಾಖೆ ಮಳೆ ಸಂಬಂಧ ಕಾಲ ಕಾಲಕ್ಕೆ ಹೊರಡಿಸುವ ಮಾಹಿತಿಯನ್ನು ಎಲ್ಲೆಡೆ ಹಂಚಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಭಾಸ್ಕರ್, ಜಗನ್ನಾಥ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಪ್ಪಣ್ಣ, ಶೇಖರ್, ತಹಶೀಲ್ದಾರರಾದ ರಾಮಚಂದ್ರ, ಪ್ರವೀಣ್ ಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.