ಮಡಿಕೇರಿ: ಸರ್ಕಾರಿ ನೌಕರರು ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಲೋಕಾಯುಕ್ತ ಎಸ್.ಪಿ.ಸುರೇಶ್ ಬಾಬು ಸೂಚನೆ ನೀಡಿದರು.

ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿ ಬಳಿಕ ಅವರು ಮಾತನಾಡಿದರು.

ಸಾರ್ವಜನಿಕರ ಕೆಲಸಗಳಿಗೆ ಸರ್ಕಾರಿ ನೌಕರರು ತ್ವರಿತಗತಿಯಲ್ಲಿ ಸ್ಪಂದಿಸಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ತುಂಬಾ ಎಚ್ಚರವಹಿಸಿ ನಿಯಮಾನುಸಾರವೇ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ನಿರ್ವಹಿಸಲು ಬಂದಿರುವುದು ಎಂಬುದನ್ನು ಅರಿತುಕೊಳ್ಳಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಕಳೆದ ಲೋಕಾಯುಕ್ತ ಸಭೆ ಸಂದರ್ಭದಲ್ಲಿ ಸ್ವೀಕರಿಸಿದ ಅರ್ಜಿಗಳ ಪಾಲನಾ ವರದಿಯನ್ನು ಪರಿಶೀಲಿಸಿದರು.

ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ಮಾತನಾಡಿ, ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಹಾಜರಾತಿ ಸಂಬಂಧ ಬಯೋಮೆಟ್ರಿಕ್ ಅಳವಡಿಸುವಂತೆ ಸೂಚಿಸಿದರು.

ಶುಕ್ರವಾರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಖಾತೆ ಬದಲಾವಣೆ, ಸರ್ವೇ ಮಾಡುವುದು, ಮತ್ತಿತರ ಅರ್ಜಿಗಳು ಸಲ್ಲಿಕೆಯಾದವು.

ಸಾರ್ವಜನಿಕರಿಂದ 8 ಅರ್ಜಿಗಳು ಸ್ವೀಕೃತವಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ 3 ಅರ್ಜಿದಾರರಿಗೆ ಲೋಕಾಯುಕ್ತ ಸಂಸ್ಥೆಯ ನಮೂನೆ 1 ಮತ್ತು 2 ನ್ನು ನೀಡಲಾಯಿತು. ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಲೋಕೇಶ್, ತಹಶೀಲ್ದಾರ್ ಪ್ರವೀಣ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.