ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಟ್ಟು 13 ವಿದ್ಯುತ್ ಸರಬರಾಜು ಉಪಕೇಂದ್ರಗಳ ಸ್ಥಾಪನೆಗೆ ಉದ್ದೇಶಿಸಲಾಗಿದ್ದು, ಇವುಗಳಲ್ಲಿ ಈಗಾಗಲೇ 4 ಉಪಕೇಂದ್ರಕ್ಕೆ ಟೆಂಡರ್ ಕರೆಯಲಾಗಿದೆ. ಇನ್ನುಳಿದ ಕೇಂದ್ರಗಳ ಸ್ಥಾಪನೆಗೂ ತ್ವರಿತ ಕ್ರಮ ಕೈಗೊಂಡು ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ಆಗುವ ತೊಂದರೆಗಳನ್ನು ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

‘ನನಗೆ ಕೊಡಗು ಎಂದರೆ ಹೆಚ್ಚು ಪ್ರೀತಿ. ಇಲ್ಲಿಯೇ ಓದಿದ್ದೇನೆ, ನನ್ನ ಬೆಳವಣಿಗೆಗೂ ಕೊಡಗು ಕಾರಣವಾಗಿದೆ. ಹಾಗಾಗಿ, ನಾನು ಯಾವುದೇ ಸಂದರ್ಭದಲ್ಲೂ ಕೊಡಗನ್ನು ಅಲಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದ ಹೇಳಿದರು.

ಸೋಮವಾರಪೇಟೆ, ಮಾದಾಪುರ, ಮೂರ್ನಾಡು, ಹುದಿಕೇರಿ, ಬಾಳೆಲೆ, ಸಿದ್ದಾಪುರ, ಕೂಡಿಗೆ, ಕೋಪಟ್ಟಿ, ಸಂಪಾಜೆ, ಕೊಡ್ಲಿಪೇಟೆ, ಕಾಟಕೇರಿ, ಕಳತ್ಮಾಡು, ಮರುಗೋಡು ಕೇಂದ್ರಗಳಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ. ಅವುಗಳ ಪೈಕಿ ಹುದಿಕೇರಿ, ಬಾಳೆಲೆ, ಮೂರ್ನಾಡು ಹಾಗೂ ಸಿದ್ದಾಪುರ ಉಪಕೇಂದ್ರಗಳ ಸ್ಥಾಪನೆಗೆ ಟೆಂಡರ್ ಸಹ ಕರೆಯಲಾಗಿದೆ. ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ₹ 208 ಕೋಟಿ ವಿನಿಯೋಗ ಮಾಡಲಾಗುತ್ತದೆ ಎಂದು ಹೇಳಿದರು.

ನೆಲದೊಳಗೆ ಕೇಬಲ್ ಹಾಕುವ ಪ್ರಸ್ತಾವವೂ ಇದೆ. ಅತಿ ಶೀಘ್ರದಲ್ಲಿ ಅದು ಸಹ ಜಾರಿಗೆ ಬರಲಿದ್ದು, ಜಿಲ್ಲೆಯಲ್ಲಿರುವ ವಿದ್ಯುತ್ ಸಮಸ್ಯೆ ನೀಗಿಸಲು ಎಲ್ಲ ಬಗೆಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಗೆ ಲೈನ್ಮೆನ್ಗಳು ಬರುವುದು ಕಡಿಮೆ. ಹಾಗಿದ್ದರೂ, ಹೆಚ್ಚುವರಿ ಲೈನ್ಮೆನ್ಗಳನ್ನು ನಿಯೋಜಿಸಿಕೊಂಡು, ಈ ಬಾರಿ ಮಳೆಗಾಲದಲ್ಲಿ ತ್ವರಿತವಾಗಿ ಸಂಪರ್ಕ ನೀಡಲಾಯಿತು ಎಂದು ಹೇಳಿದರು.

ಇದಕ್ಕೂ ಮುನ್ನ ನಡೆದ ಸೆಸ್ಕ್ನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು.

ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ಸಹ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಸೆಸ್ಕ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ 636 ಮಂಜೂರಾದ ಹುದ್ದೆಗಳಿದ್ದು, 242 ಮಂದಿ ಕಾರ್ಯನಿರ್ವಹಿಸುತಿದ್ದಾರೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

‘ಗೃಹಜ್ಯೋತಿ’ ಯೋಜನೆಯು ರಾಜ್ಯಾದ್ಯಂತ ಉತ್ತಮವಾಗಿ ನಡೆಯುತ್ತಿದ್ದು, ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 1,56,022 ಕುಟುಂಬಗಳು ಹೆಸರು ನೋಂದಣಿ ಮಾಡಿದ್ದು, ಶೇ 99.59 ರಷ್ಟು ಪ್ರಗತಿ ಸಾಧಿಸಲಾಗಿದೆ. ಇದಕ್ಕಾಗಿ ಪ್ರತಿ ತಿಂಗಳು ₹ 6.9 ಕೋಟಿ ಸಹಾಯಧನದ ಬೇಡಿಕೆ ಇದೆ’ ಎಂದು ಮಾಹಿತಿ ನೀಡಿದರು.

ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ‘ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುದಿಕೇರಿ, ಸಿದ್ದಾಪುರ, ಬಾಳೆಲೆಯಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದ್ದು, ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದೆ. ಸಂಪಾಜೆ, ಭಾಗಮಂಡಲ ಭಾಗದಲ್ಲಿಯೂ ಸಹ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ಮುಂದಾಗಲಾಗಿದೆ ಎಂದರು.

ಈ ವೇಳೆ ಮಾತನಾಡಿದ ಇಂಧನ ಇಲಾಖೆಯ ಅಧಿಕಾರಿಯೊಬ್ಬರು ಸಂಪಾಜೆ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಅರಣ್ಯವಿರುವುದರಿಂದ 33 ಕೆ.ವಿ. ವಿದ್ಯುತ್ ಉಪ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.

ಮಧ್ಯಪ್ರವೇಶಿಸಿದ ಶಾಸಕ ಡಾ.ಮಂತರ್ಗೌಡ, ‘33 ಕೆ.ವಿ.ವಿದ್ಯುತ್ ಉಪ ಕೇಂದ್ರ ನಿರ್ಮಾಣ ಮಾಡುವುದರಿಂದ ಸಮರ್ಪಕವಾಗಿ ವಿದ್ಯುತ್ ಒದಗಿಸಲು ಸಾಧ್ಯವಿಲ್ಲ. ಆದ್ದರಿಂದ ಭವಿಷ್ಯದ ದೃಷ್ಟಿಯಿಂದ 66 ಕೆ.ವಿ. ವಿದ್ಯುತ್ ಉಪಕೇಂದ್ರ ನಿರ್ಮಾಣ ಮಾಡುವುದು ಒಳ್ಳೆಯದು’ ಎಂದು ಸಲಹೆ ನೀಡಿದರು.

ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ‘ಸದ್ಯ ಈಗಾಗಲೇ ಇರುವ ಪ್ರಸ್ತಾವನೆಯಂತೆ 33 ಕೆ.ವಿ. ವಿದ್ಯುತ್ ಉಪ ಕೇಂದ್ರವನ್ನು ನಿರ್ಮಿಸಲಿ, ನಂತರ ಮುಂದಿನ ಹಂತದಲ್ಲಿ 66 ಕೆ.ವಿ. ವಿದ್ಯುತ್ ಉಪಕೇಂದ್ರವನ್ನು ನಿರ್ಮಿಸಲು ಪ್ರಯತ್ನಿಸಬಹುದು’ ಎಂದರು.

ಗಂಗಾ ಕಲ್ಯಾಣ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆಯಡಿ ಕಳೆದ ವರ್ಷ 87 ಮತ್ತು 52 ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 19 ಮತ್ತು ಕುಡಿಯುವ ನೀರು ಪೂರೈಕೆ ಯೋಜನೆಯಡಿ 76 ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷ ಧರ್ಮಜ ಉತ್ತಪ್ಪ ಭಾಗವಹಿಸಿದ್ದರು.

ಮಳೆಗಾಲದಲ್ಲಿನ ಸೆಸ್ಕ್ ಕಾರ್ಯವೈಖರಿಗೆ ಜಿಲ್ಲಾಧಿಕಾರಿ ಶ್ಲಾಘನೆ

ಪ್ರಸಕ್ತ ಸಾಲಿನ ಮುಂಗಾರಿನಲ್ಲಿನ ಸೆಸ್ಕ್ ಕಾರ್ಯನಿರ್ವಹಣೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶ್ಲಾಘಿಸಿದರು. ಆಗ ಇಲ್ಲಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದ ಅನಿತಾ ಬಾಯಿ ಹಾಗೂ ಲೈನ್ಮೆನ್ಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದರು. ಇದರಿಂದ ಕಳೆದ ವರ್ಷಕ್ಕಿಂತ ಹೆಚ್ಚು ಮಳೆ ಸುರಿದರೂ ಹಾಗೂ ಬಿರುಗಾಳಿ ಬೀಸಿದರೂ 3472 ಅಧಿಕ ವಿದ್ಯುತ್ ಕಂಬಗಳು ಉರುಳಿದರೂ ಬೇಗನೇ ವಿದ್ಯುತ್ ಸಂಪರ್ಕ ಮರುಸ್ಥಾಪಿಸಲು ಸಹಾಯವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.