ಪೊನ್ನಂಪೇಟೆ (ಕೊಡಗು): ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಭಾನುವಾರ ಬೆಳಿಗ್ಗೆಯಿಂದಲೂ ಕಾರ್ಯಾಚರಣೆ ನಡೆಸಿದರೂ ಅರಣ್ಯ ಇಲಾಖೆಯ ತಂಡದ ಕಣ್ಣಿಗೆ ಹುಲಿ ಬಿದ್ದಿರಲಿಲ್ಲ. ಆದರೆ, ಸಂಜೆ ವೇಳೆಗೆ ಮಂಚಳ್ಳಿಯ ಕಾಫಿ ತೋಟದಲ್ಲಿ ಅವಿತಿದ್ದ 10 ವರ್ಷದ ಹೆಣ್ಣು ಹುಲಿಯನ್ನು ಸೆರೆ ಹಿಡಿಯಲಾಯಿತು.

ಸ್ಥಳದಲ್ಲಿದ್ದ ವೈದ್ಯ ಮುಜೀಬ್ ಅವರು ಹುಲಿಗೆ ಅರಿವಳಿಕೆ ಚುಚ್ಚುಮದ್ದು ಹಾರಿಸಿ, ಪ್ರಜ್ಞೆ ತಪ್ಪಿಸಿದ ಬಳಿಕ ಬಲೆ ಹಾಕಿ ಹುಲಿ ಸೆರೆ ಹಿಡಿಯಲಾಯಿತು. ನಂತರ, ಬೋನಿನಲ್ಲಿ ಹಾಕಿ ಮೈಸೂರಿಗೆ ರವಾನೆ ಮಾಡಲಾಯಿತು. ಮತ್ತಿಗೋಡು ಶಿಬಿರದ ಎರಡು ಸಾಕಾನೆಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು.

ಶನಿವಾರ ಸಂಜೆ ಸೌದೆ ತರಲು ತೋಟಕ್ಕೆ ತೆರಳಿದ್ದ ಕುಮಟೂರು ಗ್ರಾಮದ ಪಣಿ ಯರವರ ಅಯ್ಯಪ್ಪ (14) ಎಂಬ ಬಾಲಕನ ಮೇಲೆ ಹುಲಿ ದಾಳಿ ನಡೆಸಿ ಸಾಯಿಸಿತ್ತು. ಇದೇ ಹುಲಿ ಭಾನುವಾರ ಬೆಳಿಗ್ಗೆ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಕಾರ್ಮಿಕ ಮಹಿಳೆ ಚಿಣ್ಣಿ (60) ಅವರ ಮೇಲೆ ದಾಳಿ ನಡೆಸಿ, ಬಲಿ ಪಡೆದಿತ್ತು. ರಸ್ತೆ ಬದಿಯಲ್ಲಿ ಅಣಬೆ ಹುಡುಕಲು ಹೋಗಿದ್ದ ವೇಳೆ ಕಾರ್ಮಿಕ ಮಹಿಳೆ ಮೇಲೆ ದಾಳಿ ಮಾಡಿ, ದೇಹವನ್ನು ಎಳೆದೊಯ್ಯುತ್ತಿದ್ದ ದೃಶ್ಯ ಕಂಡು ಕಾರ್ಮಿಕರು ಕಿರುಚಿಕೊಂಡಾಗ ಹುಲಿ ಓಡಿಹೋಗಿತ್ತು.

ಅರಣ್ಯಾಧಿಕಾರಿಗಳಿಗೆ ತರಾಟೆ: ಕಳೆದ ಐದು ತಿಂಗಳಿಂದ ಈ ಭಾಗದಲ್ಲಿ ಹುಲಿಯು ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಇಬ್ಬರು ಬಲಿಯಾಗಬೇಕಾಯಿತು ಎಂದು ಆರೋಪಿಸಿದ ರೈತ ಸಂಘದ ಕಾರ್ಯಕರ್ತರು, ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮೃತದೇಹವನ್ನು ಶ್ರೀಮಂಗಲ ಬಸ್ ನಿಲ್ದಾಣದಲ್ಲಿಟ್ಟು ಸೂಕ್ತ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸಲಾಯಿತು. ಶ್ರೀಮಂಗಲ ಪಟ್ಟಣದಲ್ಲಿ ಒಂದು ತಾಸು ಅಂಗಡಿ ಮುಚ್ಚಿ ಪ್ರತಿಭಟನೆಗೆ ಬೆಂಬಲ ಸೂಚಿಸಲಾಯಿತು. ಮೃತ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಕೈಬಿಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.