ಗೋಣಿಕೊಪ್ಪಲು: ‘ಇಲ್ಲಿನ ಲಯನ್ಸ್ ಕ್ಲಬ್ನಿಂದ ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು ‘ಫ್ರೀಡಂ ಟು ರನ್’ ಹೆಸರಿನಲ್ಲಿ ರಸ್ತೆ ಓಟದ ಸ್ಪರ್ಧೆ ಆಯೋಜಿಸಲಾಗಿದೆ’ ಎಂದು ಕ್ಲಬ್ ಅಧ್ಯಕ್ಷ ಪೊನ್ನಿಮಾಡ ಲೋಕೇಶ್ ಕಾರ್ಯಪ್ಪ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ‘15ರಂದು ಪೊನ್ನಂಪೇಟೆ ಬಸ್ ನಿಲ್ದಾಣದಿಂದ ಗೋಣಿಕೊಪ್ಪಲಿನ ಉಮಾಮಹೇಶ್ವರಿ ದೇವಸ್ಥಾನದವರೆಗೆ ಓಟ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಬಾಲಕ ಬಾಲಕಿಯರು ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ಬಹುಮಾನ ನೀಡಲಾಗುವುದು’ ಎಂದರು.

‘4 ವಿಭಾಗದಲ್ಲೂ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಸುಮಾರು 5 ಕಿ.ಮೀ ದೂರದ ಓಟದ ಸ್ಪರ್ಧೆ ಇದಾಗಿದ್ದು, ಬೆಳಿಗ್ಗೆ 6.30ಕ್ಕೆ ಪೊನ್ನಂಪೇಟೆ ಬಸವೇಶ್ವರ ದೇವಸ್ಥಾನ ಎದುರು ಹೆಸರು ನೋಂದಣಿ ಮಾಡಿಕೊಳ್ಳಬೇಕು. ಬಳಿಕ 7 ಗಂಟೆಗೆ ಓಟ ಆರಂಭವಾಗಲಿದೆ. ಗೋಣಿಕೊಪ್ಪಲು ಉಮಾಮಹೇಶ್ವರಿ ಪೆಟ್ರೋಲಿಯಂ ಆವರಣದಲ್ಲಿ ಓಟ ಅಂತ್ಯಗೊಳ್ಳಲಿದೆ. ನಂತರ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ’ ಎಂದು ಹೇಳಿದರು.

‘ಇದಲ್ಲದೆ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಮಟ್ಟದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಭಕ್ತಿಗೀತೆ ಮತ್ತು ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು’ ಎಂದು ತಿಳಿಸಿದರು.

ಕಾರ್ಯದರ್ಶಿ ಚೆಟ್ಟಿಮಾಡ ಟಿ.ಅಪ್ಪಣ್ಣ, ಖಜಾಂಚಿ ಮಾಚಿಮಾಡ ಬಿ.ಕುಶಾಲಪ್ಪ, ಹಿರಿಯ ಸದಸ್ಯ ಕಳ್ಳಂಗಡ ನೀತಿ ಪೂಣಚ್ಚ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.