ಕುಶಾಲನಗರ: ಪಟ್ಟಣ ಸೇರಿದಂತೆ ವಿವಿಧೆಡೆ ದೇವಾಲಯ ಹಾಗೂ ಸಂಘ ಸಂಸ್ಥೆಗಳು ಗೌರಿ ಹಾಗೂ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸಲಾಯಿತು.

ಇಲ್ಲಿನ ರಥಬೀದಿಯ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ 101 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

ಬೈಚನಹಳ್ಳಿ, ಗಂಧದಕೋಟೆ, ಮಾದಪಟ್ಟಣ, ಹೌಸಿಂಗ್ ಬೋರ್ಡ್, ಗುಂಡೂರಾವ್ ಬಡಾವಣೆ ಸೇರಿದಂತೆ ವಿವಿಧೆಡೆ ಗೌರಿ, ಗಣೇಶ ಹಬ್ಬದ ಅಂಗವಾಗಿ ಬೃಹತ್ ಗಣೇಶ ಮೂರ್ತಿಗಳನ್ನು ಸ್ಥಾಪಿಸಿ ಪೂಜೆ ಸಲ್ಲಿಸಿದರು.

ಹಬ್ಬದ ಅಂಗವಾಗಿ ವಿದ್ಯುತ್ ಅಲಂಕೃತ ಮಂಟಪವನ್ನು ಸಿದ್ಧಪಡಿಸಿದ್ದರು. ಪಟ್ಟಣದ ಐತಿಹಾಸಿಕ ಗಣಪತಿ ದೇವಾಲಯದಲ್ಲೂ ಕೂಡ ಗೌರಿ, ಗಣೇಶ ಹಬ್ಬದ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು.

ಕೂಡಿಗೆ ಡೇರಿ ಆಡಳಿತ ಮಂಡಳಿ, ಮತ್ತು ಅಧಿಕಾರಿ ವರ್ಗದವರು ಪ್ರತಿವರ್ಷದಂತೆ ಡೇರಿಯ ಸಭಾಂಗಣದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಅರ್ಚಕ ಕೃಷ್ಣಮೂರ್ತಿ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ, ಕೂಡಿಗೆ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್, ವ್ಯವಸ್ಥಾಪಕ ನಂದಿಶ್, ಸೇರಿದಂತೆ ಅಧಿಕಾರಿ ವರ್ಗದವರು, ಕಾರ್ಮಿಕ ವೃಂದದವರು ಭಾಗವಹಿಸಿದ್ದರು.

ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಹಾಗೂ ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ ಮತ್ತು ಯಂಗ್ ಸ್ಟಾರ್ ಅಸೋಸಿಯೇಷನ್ ವತಿಯಿಂದ 16 ನೇ ವರ್ಷದ ಅದ್ದೂರಿ ಗೌರಿ ಗಣೇಶೋತ್ಸವ ಆಚರಣೆ ಕೂಡಿಗೆ ಸರ್ಕಲ್ ಗಣಪತಿ ಸಭಾಂಗಣದಲ್ಲಿ ನಡೆಯಿತು. ವಿವಿಧ ಹೋಮ ಹವನ ಪೂಜಾ ಕೈಂಕಯಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಐದು ದಿನಗಳ ಕಾಲ ವಿವಿಧ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.