ಮಡಿಕೇರಿ: ‘ಗೃಹಲಕ್ಷ್ಮಿ’ ಯೋಜನೆಯಡಿ ಶೇ 98.98, ‘ಅನ್ನಭಾಗ್ಯ’ ಯೋಜನೆಯಡಿ ಶೇ 98ರಷ್ಟು ಪ್ರಗತಿ ಸಾಧಿಸಲಾಗಿದೆ ಎಂಬ ವಿಷಯ ಇಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪವಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ‘ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು’ ಎಂದು ನಿರ್ದೇಶನ ನೀಡಿದರು.

ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿ. ಆ ನಿಟ್ಟಿನಲ್ಲಿ ಸರ್ಕಾರದ ಉದ್ದೇಶ ಮತ್ತು ಆಶಯದಂತೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು ಎಂದು ಸೂಚಿಸಿದರು.

ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಹೀಗೆ ಪಂಚ ಯೋಜನೆಗಳು ತಲುಪಿದಾಗ ಸರ್ಕಾರಕ್ಕೆ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡಬೇಕು ಎಂದೂ ಅವರು ಹೇಳಿದರು.

ಶೇ 98ಕ್ಕೂ ಹೆಚ್ಚು ಪ್ರಗತಿ ಸಾಧನೆ

ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ ಮಾತನಾಡಿ, ‘ಜಿಲ್ಲೆಯಲ್ಲಿ 1.30 ಲಕ್ಷ ಗುರಿಯಲ್ಲಿ 97,570 ಜನರಿಗೆ ‘ಅನ್ನಭಾಗ್ಯ’ ಯೋಜನೆಯಡಿ ಹಣ ಪಾವತಿಯಾಗುತ್ತಿದೆ. ಒಟ್ಟಾರೆ, ಶೇ 98ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

‘ಯುವನಿಧಿ ಯೋಜನೆ’ಯು ಜಿಲ್ಲೆಯಲ್ಲಿ 562 ಮಂದಿಗೆ ಯೋಜನೆ ತಲುಪುತ್ತಿದೆ. ಇದುವರೆಗೆ 1,030 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ರೇಖಾ ಗಣಪತಿ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಮಾತನಾಡಿ, ‘ಗೃಹಲಕ್ಷ್ಮಿ ಯೋಜನೆಯಡಿ ಜೂನ್ವರೆಗೆ ಹಣ ಪಾವತಿಯಾಗಿದ್ದು, ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಇದೆ’ ಎಂದು ಹೇಳಿದರು.

ಜಿಲ್ಲೆಯಲ್ಲಿ ‘ಗೃಹಲಕ್ಷ್ಮಿ’ ಯೋಜನೆಯಡಿ 1,15,229 ಮಂದಿ ಹೆಸರು ನೋಂದಣಿಯಾಗಿದ್ದು, 1,14,056 ಮಂದಿಗೆ ಮಂಜೂರಾಗಿದ್ದು, ಶೇ 98.98ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅವರು ತಿಳಿಸಿದರು.

ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ್ ಕುಮಾರ್ ಮಾತನಾಡಿ, ‘ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 1,53,623 ಕುಟುಂಬಗಳಲ್ಲಿ 1,51,907 ಕುಟುಂಬಗಳು ನೋಂದಣಿಯಾಗಿದೆ. ಶೇ 98.88ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮೇ, ಅಂತ್ಯದವರೆಗೆ ₹ 5,905.30 ಲಕ್ಷ ಸಹಾಯಧನ ಕಲ್ಪಿಸಲಾಗಿದೆ’ ಎಂದರು.

‘ಶಕ್ತಿ’ ಯೋಜನೆಯಡಿ ಆರಂಭದಿಂದ ಇದುವರೆಗೆ 62,04,618 ಮಂದಿ ಮಹಿಳೆಯರು ಪ್ರಯಾಣ ಮಾಡಿದ್ದು, ₹ 24.65 ಕೋಟಿ ಭರಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕ ಮೆಹಬೂಬ್ ಅಲಿ ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮೋಹನ್ದಾಸ್ (ಮಡಿಕೇರಿ), ಜಾನ್ಸನ್ (ವಿರಾಜಪೇಟೆ) ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.