ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಕಿ ಟೂರ್ನಿ: ಕಾಲ್ಸ್ ವಿದ್ಯಾರ್ಥಿಗಳು ಚಾಂಪಿಯನ್

Published 19 ಜುಲೈ 2024, 16:19 IST
Last Updated 19 ಜುಲೈ 2024, 16:19 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಬೆಂಗಳೂರಿನ ವಿದ್ಯಾಶಿಲ್ಪ ಅಕಾಡೆಮಿ  ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಐಸಿಎಸ್‌ಸಿಇ ವಲಯಮಟ್ಟದ ಹಾಕಿ ಟೂರ್ನಿಯಲ್ಲಿ ಗೋಣಿಕೊಪ್ಪಲು ಕಾಲ್ಸ್ ಶಾಲೆಯ 14ರ ವಯೋಮಾನದ ವಿದ್ಯಾರ್ಥಿಗಳು ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಫೈನಲ್ ಪಂದ್ಯದಲ್ಲಿ  ಕಾಲ್ಸ್ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾಶಿಲ್ಪ ಅಕಾಡೆಮಿ ವಿರುದ್ಧ 2-0 ಗೋಲುಗಳಿಂದ ಜಯಗಳಿಸಿದ್ದರು.  ಸಮೃದ್ಧ್ ಚೇಂದಂಡ ಹಾಗೂ ದೈವಿಕ್ ಪೊನ್ನಣ್ಣ ತಲಾ 1 ಗೋಲು ಗಳಿಸುವ ಮೂಲಕ ತಂಡದ ಗೆಲುವಿನ ರೂವಾರಿಯಾದರು. ಈ 6 ಮಂದಿ ವಿದ್ಯಾರ್ಥಿಗಳು ಮುಂದೆ ಒಡಿಶಾ ರಾಜ್ಯದ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಾಕಿ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸುವರು.‌

19ರ ವಯೋಮಾನದ ಟೂರ್ನಿಯಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಈ 6 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಎಂಡಿ ಹಾಗೂ ಒಲಂಪಿಯನ್ ಅಶ್ವಿನಿ ನಾಚಪ್ಪ, ನಿರ್ದೇಶಕ ದತ್ತ ಕರುಂಬುಯ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT