ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಬಳಿಯ ಮಲ್ಲಂಗೆರೆಯಲ್ಲಿ ಕೂಲಿ ಕಾರ್ಮಿಕ ಮಹಿಳೆ ಶಿವಮ್ಮ (45) ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಹುಣಸೂರು ಮೂಲದವರಾದ ಶಿವಮ್ಮ 4 ದಿನಗಳ ಹಿಂದೆ ಮಲ್ಲಂಗೆರೆಯ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ಬಂದು ಪತಿಯೊಂದಿಗೆ ಲೈನ್ ಮನೆಯಲ್ಲಿ ವಾಸಿಸುತ್ತಿದ್ದರು. ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಪತಿ ನಾಪತ್ತೆಯಾಗಿದ್ದು ಆತನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್, ಗೋಣಿಕೊಪ್ಪಲು ಸಿಪಿಐ ಶಿವರಾಜ್ ಮುಧೋಳ್, ಪೊನ್ನಂಪೇಟೆ ಸಬ್ ಇನ್ಸ್ಪೆಕ್ಟರ್ ನವೀನ್ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.