ಕುಶಾಲನಗರ: ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಬುಧವಾರ ತಾಲ್ಲೂಕು ಆಡಳಿತದಿಂದ ಸ್ವಾಗತ ನೀಡಲಾಯಿತು.

ಪಟ್ಟಣದಲ್ಲಿ ಕನ್ನಡ ಜ್ಯೋತಿ ರಥಕ್ಕೆ ತಹಶೀಲ್ದಾರ್ ಕಿರಣ್ ಗೌರಯ್ಯ ಪುಷ್ಪಾರ್ಚನೆ ಮಾಡಿದರು. ಬೈಚನಹಳ್ಳಿ ಮಾರಮ್ಮ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆಗೆ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಚಾಲನೆ ನೀಡಿದರು.

ವಿವಿಧ ಕನ್ನಡಪರ ಸಂಘಟನೆಗಳು, ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಜನಪ್ರತಿನಿಧಿಗಳು ಕನ್ನಡಾಂಬೆ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಕನ್ನಡಾಭಿಮಾನಿಗಳು ಶಾಲು ಹಾಕಿಕೊಂಡು ಕನ್ನಡ, ಕರ್ನಾಟಕ ಪರ ಘೋಷಣೆ ಕೂಗಿದರು. ಇದೇ ಸಂದರ್ಭ ಮಂಡ್ಯ ಜಿಲ್ಲೆಯ ಕಲಾವಿದರು ಡೊಳ್ಳು ಕುಣಿತ ಪ್ರದರ್ಶಿಸಿ ಗಮನಸೆಳೆದರು.

ಕೂಡಿಗೆ: ಕನ್ನಡ ಜ್ಯೋತಿ ರಥಕ್ಕೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಹಾಗೂ ಶಾಲಾ- ಕಾಲೇಜುಗಳಿಂದ ಕೂಡಿಗೆ ವೃತ್ತದಲ್ಲಿ ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.

ಸೋಮವಾರಪೇಟೆ ತಾಲ್ಲೂಕಿನಿಂದ ಕುಶಾಲನಗರ ತಾಲ್ಲೂಕಿಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಕನ್ನಡ ರಥವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್ ಪುಷ್ಪನಮನ ಸಲ್ಲಿಸಿ, ಈಡುಗಾಯಿ ಒಡೆಯುವ ಮೂಲಕ ಸ್ವಾಗತಿಸಿದರು.
ನಂತರ ಮಾತನಾಡಿದ ಅವರು, ‘ಈ ರಥವು ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುತ್ತದೆ. ನಾವೆಲ್ಲರೂ ಕನ್ನಡ ನಾಡು- ನುಡಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿಹಿಡಿಯಲು ಪಣ ತೊಡಬೇಕು’ ಎಂದು ಮನವಿ ಮಾಡಿದರು.

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಸಂಯೋಜಕ ಮಣಜೂರು ಮಂಜುನಾಥ್, ಕೂಡಿಗೆ ಸರ್ಕಾರಿ ಪಿಯೂ ಕಾಲೇಜು ಪ್ರಾಂಶುಪಾಲ ಡಾ.ಬಸಪ್ಪ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಪಿಡಿಒ ಎಂ.ಆರ್.ಸಂತೋಷ್, ಮುಖ್ಯ ಶಿಕ್ಷಕ ಎಸ್.ಎ.ಯೋಗೇಶ್, ಕಾಲೇಜು ಅಭಿವೃದ್ಧಿ ಸಮಿತಿಯ ಮಾಜಿ ಉಪಾಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ, ಉಪನ್ಯಾಸಕರಾದ ಸತೀಶ್, ರವೀಶ್, ಹನುಮರಾಜ್, ಶಿಕ್ಷಕ ನಾಗರಾಜ್, ಆಟೊ ರಿಕ್ಷಾ ಚಾಲಕರ ಸಂಘದ ಪದಾಧಿಕಾರಿಗಳಾದ ರಕ್ಷಿನ್, ಕಾರ್ತಿಕ್ ಪಾಲ್ಗೊಂಡಿದ್ದರು.

ನಂತರ ಶಾಲಾ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.