ಸೋಮವಾರಪೇಟೆ: ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್, ದಕ್ಷಿಣ ಪ್ರಾಂತ, ಮಡಿಕೇರಿ ವಿಭಾಗ ಸೇವಾ ಭಾರತಿ ಇವರ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ 11 ಗ್ರಾಮಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಹಾಗೂ ಔಷಧ ವಿತರಣಾ ಕಾರ್ಯಕ್ರಮ ಭಾನುವಾರ ನಡೆಯಿತು.

ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚಮ್ಮನ ಬಾಣೆ ಸಮುದಾಯ ಭವನದಲ್ಲಿ ಬಲಮುರಿ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ. ಸೋಮಶೇಖರ್ ಹಾಗೂ ಬಳಗುಂದ ಸ.ಹಿ.ಪ್ರಾ. ಶಾಲೆಯಲ್ಲಿ ಬೇಳೂರು ಗ್ರಾ.ಪಂ. ಅಧ್ಯಕ್ಷ ಬಿ.ಎಂ. ಪ್ರಶಾಂತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ಸಾಯಿ ಕೃಷ್ಣ, ಡಾ. ರೋಹಿತ್, ಡಾ. ನಿಂಗನಗೌಡ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ವೈದ್ಯರುಗಳು ತಪಾಸಣೆ ನಡೆಸಿದರು.

ತಾಲ್ಲೂಕಿನ ಮಾದಾಪುರ, ಐಗೂರು, ಚೌಡ್ಲು, ಕಿಬ್ಬೆಟ್ಟ, ಶನಿವಾರಸಂತೆ, ನಿಡ್ತ, ತೋಳೂರುಶೆಟ್ಟಳ್ಳಿ, ಬೆಟ್ಟದಳ್ಳಿ, ಸೋಮವಾರಪೇಟೆ ಪಟ್ಟಣದ ಜನತಾ ಕಾಲೊನಿಯಲ್ಲಿ ಶಿಬಿರ ನಡೆಯಿತು. ನೂರಾರು ಮಂದಿ ತಪಾಸಣೆಗೆ ಒಳಪಟ್ಟರು. ಉಚಿತ ಔಷಧವನ್ನೂ ಪಡೆದರು.

ಸಮುದಾಯ ಆರೋಗ್ಯ ಅಧಿಕಾರಿಗಳು, ಗ್ರಾಮ ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ವಯಂ ಸೇವಕರುಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭ ಜನರಿಗೆ ಆಯುಷ್ಮಾನ್ ಕಾರ್ಡ್ ಮಾಡಿ ಕೊಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.