ಸಮನ್ವಯತೆಯಿಂದ ಕಾರ್ಯನಿರ್ವಹಣೆ;
ಡಿಸಿಎಫ್ ಭಾಸ್ಕರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಮಾತನಾಡಿ ‘ಎಲ್ಲರೂ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ವನ್ಯಜೀವಿ ಉಪಟಳವನ್ನು ತಡೆಯಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು. ಸೋಲಾರ್ ಬೇಲಿ ಹಾಗೂ ಬ್ಯಾರಿಕೇಡ್‍ಗಳನ್ನು ಸರಿಯಾಗಿ ನಿರ್ವಹಣೆ ಮಾಡಿದಲ್ಲಿ ಕಾಡಾನೆ ಹಾವಳಿ ತಡೆಯಬಹುದು. ಇದಕ್ಕಾಗಿ ಅಗತ್ಯ ಕ್ರಿಯಾಯೋಜನೆ ತಯಾರಿಸಲಾಗುವುದು ಎಂದರು. ‘ಶನಿವಾರಸಂತೆ ಬೆಂಡೆಬೆಟ್ಟ ಆನೆಕಾಡು ದುಬಾರೆ ಸಿದ್ದಾಪುರ ಮಾಲ್ದಾರೆ ನಾಗರಹೊಳೆ ಈ ವ್ಯಾಪ್ತಿಯಲ್ಲಿ ಹೆಚ್ಚು ಕಾಡಾನೆಗಳು ಸಂಚರಿಸುತ್ತವೆ’ ಎಂದು ಮಾಹಿತಿ ನೀಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ಮಾತನಾಡಿ ‘ಆರ್‌ಆರ್‌ಟಿ ಮತ್ತು ‘ಇಟಿಎಫ್’ ಮಧ್ಯೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮುಂದಾಗಲಾಗಿದೆ’ ಎಂದು ಹೇಳಿದರು.