ಮಡಿಕೇರಿ: ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಗೆ ಆಕಾಂಕ್ಷಿ ಏಕಾಗಬಾರದು ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಪ್ರಶ್ನಿಸಿದರು.

ನಾನೊಬ್ಬನೇ ಪಕ್ಷಾಂತರ ಮಾಡಿಲ್ಲ. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಹುತೇಕ ರಾಜಕಾರಣಿಗಳು ಬೇರೆ ಬೇರೆ ಪಕ್ಷಗಳಲ್ಲಿದ್ದವರೇ ಆಗಿದ್ದಾರೆ. ಆದರೆ, ನಾನು ಯಾರಿಂದಲೂ ಯಾವುದನ್ನೂ ಮುಚ್ಚಿಟ್ಟಿಲ್ಲ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಎಲ್ಲರಿಗೂ ತಿಳಿದೇ ಇದೆ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈಗ ದೇಶದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ಎದುರಾಳಿಗಳನ್ನು ವೈರಿಗಳಂತೆ ಪರಿಗಣಿಸಿ ಜಾರಿ ನಿರ್ದೇಶನಾಲಯದ ಮೂಲಕ ಅವರ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆ. ಇದು ನಿಜಕ್ಕೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದರು.

ದಕ್ಷಿಣ ಭಾರತದ ಜನರ ಹಣ ಉತ್ತರ ಭಾರತದ ಕಡೆಗೆ ಹರಿಯುತ್ತಿದೆ. ಈ ದೇಶದ ಅಸ್ಮಿತೆ ಶ್ರೀರಾಮ ಒಂದು ಪಕ್ಷಕ್ಕೆ ಸೀಮಿತವಾಗಿ, ಮುಂಬರುವ ಚುನಾವಣೆಯ ವಿಷಯವಾಗಿರುವುದು ಸರಿಯಲ್ಲ ಎಂದು ಟೀಕಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲ ಪ್ರಧಾನಿ ಜವಾಹರಲಾಲ ನೆಹರೂ ಅವರ ಬಗ್ಗೆ ಮಾತನಾಡಿರುವುದು ತಪ್ಪು. ಅವರು ಪ್ರಧಾನಿಯಾದಾಗ ದೇಶದ ಜನರಿಗೆ ಊಟವೇ ಇರಲಿಲ್ಲ. ಆಗ ಅಣೆಕಟ್ಟುಗಳನ್ನು ಕಟ್ಟಿ ಇಲ್ಲಿ ಆಹಾರ ಉತ್ಪಾದನೆ ಹೆಚ್ಚಾಗುವಂತೆ ಮಾಡಿದ್ದನ್ನು ಎಂದಿಗೂ ಮರೆಯಬಾರದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.