ಗೋಣಿಕೊಪ್ಪಲು: ಕಾಡಾನೆ ದಾಳಿಯಿಂದ ಬಲಗೈ ಮುರಿತ ಉಂಟಾಗಿರುವ ಪಾಲಿಬೆಟ್ಟ ಸಮೀಪದ ಬಸವನಹಳ್ಳಿಯ ಜೆ.ಎಚ್. ಚಂದ್ರ ಅವರ ಆರೋಗ್ಯವನ್ನು ರಾಜ್ಯ ವನ್ಯಜೀವಿ ಸಂರಕ್ಷಣಾ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ವಿಚಾರಿಸಿದರು.

ಬಸವನಹಳ್ಳಿಯ ಮನೆ ಸಮೀಪದ ಇದ್ದ ಚಂದ್ರ ಅವರ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಪಾಲಿಬೆಟ್ಟದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಸಂಕೇತ್ ಪೂವಯ್ಯ ಅವರು ಭೇಟಿ ನೀಡಿ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿದರು. ವೈದ್ಯರ ತಂಡದೊಂದಿಗೆ ಚರ್ಚಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಚೆನ್ನಂಗಿ ಬಸವನಹಳ್ಳಿಯ ವ್ಯಾಪ್ತಿಯಲ್ಲಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಶಾಸಕ ಎ.ಎಸ್.ಪೊನ್ನಣ್ಣ ಅವರೊಂದಿಗೂ ಚರ್ಚಿಸಿರುವುದಾಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.