ಮಡಿಕೇರಿ: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿತವಾಗಿರುವ ಸ್ಥಳದಲ್ಲಿ ಶನಿವಾರ ಮಧ್ಯಾಹ್ನದ ವೇಳೆಗೆ ಎನ್ಡಿಆರ್ಎಫ್ ಕಾರ್ಯಾಚರಣೆ ಆರಂಭಿಸಿದ್ದು ಒಂದು ಮೃತದೇಹ ಪತ್ತೆಯಾಗಿದೆ.

ಕ್ಷೇತ್ರದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರ ಅಣ್ಣ ಆನಂದ ತೀರ್ಥ ಸ್ವಾಮಿ (86) ಅವರ ಮೃತದೇಹವೆಂದು ಗುರುತಿಸಲಾಗಿದೆ. ಇನ್ನೂ ಕಣ್ಮರೆಯಾದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ತಲಕಾವೇರಿ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದು ಕುಸಿದ ಬೆಟ್ಟದ ಸ್ಥಳದ ಕೆಸರು ಮಣ್ಣಿನ ನಡುವೆ ಎನ್ಡಿಆರ್ಎಫ್ ಸಿಬ್ಬಂದಿ ಕಾರ್ಯಾಚರಣೆ ಸಾಗುತ್ತಿದೆ. ಸ್ಥಳವು ಅತ್ಯಂತ ಅಪಾಯಕಾರಿಯಾಗಿದೆ. ಹಗ್ಗದ ನೆರವು ಪಡೆದು ಭೂಕುಸಿತ ಸ್ಥಳದಲ್ಲಿ ರಕ್ಷಣಾ ಪಡೆಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಭಾಗಮಂಡಲದಲ್ಲೂ ನೀರಿನ ಪ್ರಮಾಣ ಇಳಿಯುತ್ತಿದೆ. ನೀರಿನ ಪ್ರಮಾಣ ಇಳಿದಿರುವ ಕಾರಣ ಜೆಸಿಬಿಯನ್ನು ತಲಕಾವೇರಿ ತರಿಸಲಾಗಿದೆ. ಭಾಗಮಂಡಲದಿಂದ ತಲಕಾವೇರಿ ತನಕವು ರಸ್ತೆಯಲ್ಲಿ ಕುಸಿದಿದ್ದ ಮಣ್ಣನ್ನು ತೆರವು ಮಾಡಲಾಗಿದೆ.

ಆನಂದ ತೀರ್ಥ ಸ್ವಾಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.