ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಣ ಮೀನು ಮಾರುಕಟ್ಟೆ ಪರಿಶೀಲನೆ

Published : 5 ಅಕ್ಟೋಬರ್ 2024, 7:55 IST
Last Updated : 5 ಅಕ್ಟೋಬರ್ 2024, 7:55 IST
ಫಾಲೋ ಮಾಡಿ
Comments

ವಿರಾಜಪೇಟೆ: ಪುರಸಭೆಯಿಂದ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸ್ವಚ್ಛ ಭಾರತ್ ಅಭಿಯಾನದ ಪ್ರಯುಕ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ‘ಪಟ್ಟಣ ಪ್ರದೇಶದಲ್ಲಿ ಜನದಟ್ಟಣೆ ಇರುವುದರಿಂದ ಹೆಚ್ಚು ಘನ ತ್ಯಾಜ್ಯ ಉತ್ಪತ್ತಿಯಾಗುತ್ತದೆ. ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡದಿದ್ದರೆ ಸಮಸ್ಯೆ ಉದ್ಭವವಾಗುತ್ತದೆ. ಪುರಸಭೆ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರು ಬೆಂಬಲ ನೀಡುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಆಗ ಮಾತ್ರ ಪಟ್ಟಣ ಸೇರಿದಂತೆ ನಮ್ಮ ಪರಿಸರವು ಸ್ವಚ್ಛವಾಗಿರುತ್ತದೆ’ ಎಂದರು.

ಪುರಸಭೆಯ ಅಧ್ಯಕ್ಷೆ ಎಂ.ಕೆ. ದೇಚಮ್ಮ ಕಾಳಪ್ಪ ಮಾತನಾಡಿ, ಪಟ್ಟಣದ ಮಾರುಕಟ್ಟೆ ಹಾಗೂ ವಿರಾಜಪೇಟೆ ಅಭಿವೃದ್ಧಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡುವಂತೆ ಶಾಸಕರಿಗೆ ಮನವಿ ಮಾಡಿದರು.

ಶಾಸಕ ಎ.ಎಸ್.ಪೊನ್ನಣ್ಣ ಅವರು ಖಾಸಗಿ ಬಸ್‌ ನಿಲ್ದಾಣ ಹಾಗೂ ಒಣ ಮೀನು ಮಾರುಕಟ್ಟೆಯನ್ನು ಪರಿಶೀಲಿಸಿದರು.

ತಹಶೀಲ್ದಾರ್ ರಾಮಚಂದ್ರ, ಪುರಸಭೆಯ ಮುಖ್ಯಾಧಿಕಾರಿ ಚಂದ್ರ ಕುಮಾರ್, ಉಪಾಧ್ಯಕ್ಷೆ ಫಸಿಹ ತಬಸುಂ, ಸದಸ್ಯರಾದ ಸಿ.ಕೆ. ಪೃಥ್ವಿನಾಥ್, ಜಲೀಲ್ ಅಹ್ಮದ್, ರಜನಿಕಾಂತ್, ರಂಜಿ ಪೂಣಚ್ಚ, ರಾಜೇಶ್ ಪದ್ಮನಾಭ, ಮಹದೇವ್, ಆಗಸ್ಟೀನ್ ಬೆನ್ನಿ, ಮಹಮ್ಮದ್ ರಾಫಿ, ಸುನಿತಾ ಜುನಾ, ನಾಮನಿರ್ದೇಶಿತ ಸದಸ್ಯರಾದ ಶಬರೀಶ್ ಶೆಟ್ಟಿ, ದಿನೇಶ್, ಹಮೀದ್, ಅತೀಫ್ ಮನ್ನ, ಪುರಸಭೆ ಕಚೇರಿ ವ್ಯವಸ್ಥಾಪಕರಾದ ಸುಜಾತ ಸಿಬ್ಬಂದಿಗಳಾದ ಕೋಮಲಾ, ಸುಲೇಖ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT