ಮಡಿಕೇರಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ನಿಧನ ತುಂಬಲಾರದ ನಷ್ಟ ಎಂದು ಕಾಂಗ್ರೆಸ್ ವಕ್ತಾರ ಟಿ.ಪಿ.ರಮೇಶ್ ಹೇಳಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.

ಆರ್.ಧ್ರುವನಾರಾಯಣ ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿದ್ದರು. ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಸಾಕಷ್ಟು ಶ್ರಮ ವಹಿಸಿದ್ದರು. ಅವರು ಉಸ್ತುವಾರಿಯಾದ ನಂತರ ಜಿಲ್ಲೆಯಲ್ಲಿ ಪಕ್ಷಕ್ಕೆ ಹೊಸ ಶಕ್ತಿ ಬಂದಿತು ಎಂದರು.

ಅವರೊಬ್ಬ ಸರಳ ಸಜ್ಜನಿಕೆಯ ವ್ಯಕ್ತಿ ಮಾತ್ರವಲ್ಲ ಅಜಾತಶತ್ರುವೂ ಆಗಿದ್ದರು ಎಂದು ಹೇಳಿದರು.

ಆರ್. ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು. ಮೌನಾಚರಣೆಯ ಮೂಲಕ ಶಾಂತಿ ಕೋರಲಾಯಿತು.

ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಎಚ್.ಎ.ಹಂಸ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ, ಮುಖಂಡರಾದ ಕಾನೆಹಿತ್ಲು ಮೊಣ್ಣಪ್ಪ, ಟಿ.ಎಚ್.ಉದಯಕುಮಾರ್, ಪ್ರಕಾಶ್ ಆಚಾರ್ಯ, ಜಗದೀಶ್, ಮುದ್ದುರಾಜು, ಕೆ.ಜಿ.ಪೀಟರ್, ಪ್ರೇಮ ಕೃಷ್ಣಪ್ಪ, ಕೆ.ಆರ್.ದಿನೇಶ್, ಕಲೀಲ್ ಬಾಷಾ, ಎಂ.ಇ.ಫಾರೂಖ್, ರಿಯಾಬ್ವುದ್ದೀನ್, ಆರ್.ಪಿ.ಚಂದ್ರಶೇಖರ್, ಎಂ.ಎನ್.ರವೂಫ್, ಎಂ.ಜಿ.ನಾಗೇಶ್, ಪುಷ್ಪ ಪೂಣಚ್ಚ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.