ಮಡಿಕೇರಿ: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಜುಲೈ 27ರಂದು ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇದೀಗ ಸೆಸ್ಕ್ ಸಿಬ್ಬಂದಿ ಕಾರ್ಯಾಚರಣೆಗೂ ಬಿರುಗಾಳಿ ಅಡ್ಡಿಯಾಗಿದ್ದು, ಆತಂಕ ಮೂಡಿಸಿದೆ.

ಬಿರುಗಾಳಿಗೆ ನಿರಂತರವಾಗಿ ಮರಗಳು ಎಲ್ಲೆಂದರಲ್ಲಿ ಬೀಳುತ್ತಿದ್ದು, ಸೆಸ್ಕ್ ಸಿಬ್ಬಂದಿ ಕಾರ್ಯನಿರ್ವಹಣೆ ಕಷ್ಟಕರವಾಗಿ ಪರಿಣಮಿಸಿದೆ. ಇಲ್ಲಿನ ವಿರಾಜಪೇಟೆಯಿಂದ ಸಿದ್ದಾಪುರ ಕಡೆಗೆ ಹಾದು ಹೋಗುವ 33 ಕೆ.ವಿ ಸಾಮರ್ಥ್ಯದ ವಿದ್ಯುತ್ ಮಾರ್ಗದ ಮೇಲೆ ಒಂದೇ ದಿನ 4 ಬಾರಿ ಮರಗಳು ಬಿದ್ದವು. ಇದರಿಂದ ಇಲ್ಲಿ ದುರಸ್ತಿ ಕಾರ್ಯವನ್ನು ಸಿಬ್ಬಂದಿಯ ಸುರಕ್ಷತೆಯ ಕಾರಣಕ್ಕೆ ಒಂದುದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ ಎಂದು ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾಬಾಯಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.