ಮಡಿಕೇರಿ: ಕೊಡವ ಸೇನಾನಿಗಳ ಕುರಿತು ವಾಟ್ಸ್ಆ್ಯಪ್ ಗ್ರೂಪ್ವೊಂದರಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಆರೋಪದಲ್ಲಿ ವಕೀಲ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಹಾಲೆಟ್ಟಿ ಗ್ರಾಮದ ವಿದ್ಯಾಧರಗೌಡ (66) ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಸಪ್ತಸಾಗರ (ಕಡಲು) ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶ್ರೀವಾತ್ಸ ಭಟ್ ಎಂಬ ಹೆಸರಿನ ಮೊಬೈಲ್ ಸಂಖ್ಯೆಯಿಂದ ಫೀಲ್ಡ್ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿದ ಕುರಿತು ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಎಸ್ಪಿ ಕೆ.ರಾಮರಾಜನ್ ತಿಳಿಸಿದರು.

ವಾಟ್ಸ್ಆ್ಯಪ್ ಗ್ರೂಪನಲ್ಲಿ ನಡೆದ ಚರ್ಚೆಯ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿ, ಘಟನೆ ಕುರಿತು ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.