ಮಡಿಕೇರಿ: ಹುತಾತ್ಮರ ದಿನದ ಅಂಗವಾಗಿ ಮಂಗಳವಾರ ಮಹಾತ್ಮ ಗಾಂಧಿ ಅವರ ಚಿತಾಭಸ್ಮವನ್ನು ನಗರದಲ್ಲಿ ಮೆರವಣಿಗೆ ಮಾಡಲಾಯಿತು.

ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಚಿತಾಭಸ್ಮವನ್ನು ತೆಗೆದುಕೊಂಡು ಪುಷ್ಪನಮನ ಸಲ್ಲಿಸಲಾಯಿತು. ನಂತರ, ಪೊಲೀಸ್ ವಾದ್ಯವೃಂದದ ಜೊತೆಗೆ ಪೊಲೀಸರು, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಚಿತಾಭಸ್ಮದ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಬಳಿಕ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು.

ಗಾಂಧೀಜಿ ಅವರಿಗೆ ಪ್ರಿಯವಾಗಿದ್ದ ಭಜನೆಗಳನ್ನು ಹಾಡಲಾಯಿತು.

ಸರ್ವೋದಯ ಸಮಿತಿಯ ಅಂಬೆಕಲ್ ಕುಶಾಲಪ್ಪ, ಎಂ.ಸಿ.ನಾಣಯ್ಯ, ಟಿ.ಪಿ.ರಮೇಶ, ಅಂಬೆಕಲ್ ನವೀನ್, ಬೊಳ್ಳಜಿರ ಅಯ್ಯಪ್ಪ, ಸ್ಕೌಟ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯೂ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.