ಗೋಣಿಕೊಪ್ಪಲು: ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಕೀಲ ಎಸ್.ಪಿ. ದಿನೇಶ್ ಪರ ವಿರಾಜಪೇಟೆ ಸಿ.ಜೆ.ಅಶೋಕ್ ಕುಮಾರ್ ಶನಿವಾರ ದಕ್ಷಿಣ ಕೊಡಗಿನಾದ್ಯಂತ ಮತಯಾಚಿಸಿದರು.

ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಪದವೀಧರ ಮತದಾರರನ್ನು ಭೇಟಿ ಮಾಡಿದ ತಂಡ, ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಸ್.ಪಿ.ದಿನೇಶ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ವಿರಾಜಪೇಟೆಯ ಕಾವೇರಿ ಕಾಲೇಜು, ಸಂತ ಅನ್ನಮ್ಮ ವಿದ್ಯಾಸಂಸ್ಥೆ, ಸರ್ಕಾರಿ ಪದವಿ ಮತ್ತು ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪಲಿನ ಕಾವೇರಿ ಕಾಲೇಜುಗಳಿಗೆ ತೆರಳಿ ಮತಯಾಚಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕಳೆದ ಎರಡು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಎಸ್.ಪಿ.ದಿನೇಶ್ ಕೇವಲ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇದೀಗ ಮೂರನೇ ಬಾರಿಗೆ ಆಯ್ಕೆ ಬಯಸಿ ಸ್ವತಂತ್ರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಪದವೀಧರರ ಸಮಸ್ಯೆಗಳ ಕುರಿತು ಆಳವಾಗಿ ಅಧ್ಯಯನ ನಡೆಸಿರುವ ಅವರು ಹಿರಿಯ ನ್ಯಾಯವಾದಿ, ಬದ್ಧತೆಯುಳ್ಳ ಮತ್ತು ದೂರ ದೃಷ್ಟಿಯುಳ್ಳ ರಾಜಕಾರಣಿ. ಈ ಬಾರಿ ಚುನಾವಣೆಯಲ್ಲಿ ಪದವೀಧರರು ಅವರನ್ನು ಕೈ ಹಿಡಿಯುವ ವಿಶ್ವಾಸವಿದ್ದು, ಮೂರನೇ ಬಾರಿಯ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕೇಶ್ ಶಿವಮೊಗ್ಗ, ವಕೀಲ ಪ್ರವೀಣ್ ಕುಮಾರ್, ಮುಖಂಡರಾದ ಲೋಕೇಶ್ ಮೈಸೂರು, ಶಿವಕುಮಾರ್, ಸದಾಶಿವಪ್ಪ ಮೊದಲಾದವರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.