ನಾಪೋಕ್ಲು: ಸಮೀಪದ ಮೂರ್ನಾಡಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜಾ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಲಿದೆ.

ಮೂರ್ನಾಡಿನ ಪಾಂಡಾಣೆ ಶಾಲಾ ಮೈದಾನದಲ್ಲಿ ನಿರ್ಮಿಸಲಾಗಿರುವ ಭವ್ಯ ಅಲಂಕೃತ ವೇದಿಕೆಯಲ್ಲಿ 31ನೇ ವರ್ಷದ ಆಯುಧಪೂಜಾ ಸಂಭ್ರಮಾಚರಣೆ ಹಲವು ಕಾರ್ಯಕ್ರಮಗಳ ವೈವಿಧ್ಯದೊಂದಿಗೆ ಶುಕ್ರವಾರ ನಡೆಯಲಿದೆ.

ಆಯುಧ ಪೂಜಾ ಕಾರ್ಯಕ್ರಮವು ಮಧ್ಯಾಹ್ನ 2 ಗಂಟೆಗೆ ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯೊಂದಿಗೆ ಪ್ರಾರಂಭಗೊಳ್ಳುತ್ತದೆ. ನಂತರ ಮುಖ್ಯರಸ್ತೆಯಲ್ಲಿ ಅಲಂಕೃತ ವಾಹನಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಈ ಬಾರಿಯೂ ವಿಶೇಷವಾಗಿ ವಿಟ್ಲದ ರಸಿಕ ಗೊಂಬೆ ಬಳಗದವರ ಬೊಂಬೆ ಕುಣಿತ ಮತ್ತು ವಾದ್ಯಗೋಷ್ಠಿ ಗಮನಸೆಳೆಯಲಿದೆ.

ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಕರವಂಡ ಕೆ. ಸಜನ್ ಗಣಪತಿ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಬಿಜೆಪಿ ಮುಖಂಡ ಪ್ರತಾಪಸಿಂಹ, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್ ರೈ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಮಕ್ಕಳ ವೈದ್ಯ ಡಾ. ಗೌರವ್ ಅಯ್ಯಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್. ರೇಖಾಬಾಲು, ಪಿಡಬ್ಲ್ಯೂಡಿ ಇಲಾಖೆಯ ಕೋಳುಮಾಡಂಡ ಮಣಿಚಂಗಪ್ಪ, ಮೂರ್ನಾಡು ಹಿಂದೂ ರುದ್ರಭೂಮಿ ಅಧ್ಯಕ್ಷ ಬಿ.ಎಸ್. ಅರುಣ್ ರೈ, ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಬಾಬು ಪಾಲ್ಗೊಳ್ಳಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಮರಗೋಡು ಗ್ರಾಮದ ಮಾಜಿ ಸೈನಿಕ ಕ್ಯಾಪ್ಟನ್ ಹೊಸೊಕ್ಲು ಚಿಣ್ಣಪ್ಪ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಚೆಯ್ಯಂಡ ರಘು ತಿಮ್ಮಯ್ಯ ಹಾಗೂ ನಿವೃತ್ತ ಪೊಲೀಸ್ ಉಪನಿರೀಕ್ಷಕ ಕೆ.ಎಂ. ಸದಾಶಿವ ಅವರನ್ನು ಸನ್ಮಾನಿಸಲಾಗುವುದು. ಅಲಂಕೃತ ದ್ವಿಚಕ್ರ, ತ್ರಿಚಕ್ರ, ನಾಲ್ಕುಚಕ್ರ, ಆರು ಚಕ್ರ ವಾಹನಗಳು ಮತ್ತು ಅಂಗಡಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ನೀಡಲಾಗುವುದು. ರಾತ್ರಿ 8.30 ರಿಂದ ಭದ್ರಾವತಿ ಬ್ರದರ್ಸ್ ಆರ್ಕೆಸ್ಟ್ರಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.