ಮಂಗಳವಾರ, 2 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಡಗು: ತಗ್ಗಿದ ಮಳೆ ಪ್ರಮಾಣ

Published 30 ಜೂನ್ 2024, 4:55 IST
Last Updated 30 ಜೂನ್ 2024, 4:55 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಗಣನೀಯವಾಗಿ ತಗ್ಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 1,577 ಕ್ಯುಸೆಕ್‌ಗೆ ಇಳಿಕೆಯಾಗಿದೆ. ಮುಂಜಾಗ್ರತೆಯಾಗಿ ಎಲ್ಲ ಗಾಜಿನ ಸೇತುವೆ (ಗ್ಲಾಸ್ ಬ್ರಿಡ್ಜ್‌)ಗಳ ಬಳಕೆಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 7 ಸೆಂ.ಮೀ ಹಾಗೂ ಪೊನ್ನಂಪೇಟೆ ಹೋಬಳಿಯಲ್ಲಿ 4 ಸೆಂ.ಮೀನಷ್ಟು ಮಳೆ ಸುರಿದಿರುವುದು ದಾಖಲಾಗಿದೆ. ಮಡಿಕೇರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಹಾಗೂ ನಾಪೋಕ್ಲು ವ್ಯಾಪ್ತಿಯಲ್ಲಿ 2 ಸೆಂ.ಮೀ ಮಾತ್ರವೇ ಮಳೆಯಾಗಿದೆ.

ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

ಹಾಸನ (ವರದಿ): ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಆಗುತ್ತಿರುವ ಕಾರಣ, ಜಿಲ್ಲೆಯ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಶನಿವಾರ 5864 ಕ್ಯುಸೆಕ್‌ ಒಳಹರಿವು ದಾಖಲಾಗಿದೆ.

ಜಲಾಶಯದ ಗರಿಷ್ಠ ಮಟ್ಟ 2922 ಅಡಿ ಇದ್ದು, ಶನಿವಾರ 2887 ಅಡಿ ನೀರಿತ್ತು. ಅದರಲ್ಲಿ ಬಳಕೆಗೆ 8.390 ಟಿಎಂಸಿ ನೀರು ಲಭ್ಯವಾಗಿದೆ. ಕಳೆದ ವರ್ಷ ಮಳೆಯಿಲ್ಲದೆ ಕುಡಿಯುವ ನೀರಿಗೂ ಪರಿತಪಿಸುವಂತಾಗಿತ್ತು. ಈಗ ಸುರಿಯುತ್ತಿರುವ ಮಳೆಯಿಂದ ಜಲಾಶಯದಲ್ಲಿ ಸಂಗ್ರಹ ಸ್ವಲ್ಪ ಏರಿದೆ. ನೀರಿನ ಬವಣೆ ಸದ್ಯಕ್ಕೆ ನೀಗಿದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT