ಸುಂಟಿಕೊಪ್ಪ; ಇಲ್ಲಿನ ಗ್ರಾಮ ಪಂಚಾಯಿತಿ ಮೂಲ ಸಮಸ್ಯೆಗಳ ನಿವಾರಣೆಗೆ ಅನುದಾನ ಬಿಡುಗಡೆಗೊಳಿಸುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು ಕೊಡಗು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಕಸ ವಿಲೇವಾರಿ ವಾಹನ ತುಂಬಾ ಹಳೆಯದಾಗಿದ್ದು, ಆಗಾಗ್ಗೆ ದುರಸ್ತಿ ಬರುತ್ತದೆ. ಇದರಿಂದ ನಿತ್ಯ ಮನೆಗಳಲ್ಲಿ ಸಂಗ್ರಹವಾಗುವ ಕಸವನ್ನು ವಿಲೇವಾರಿಗೊಳಿಸಲು ಕಷ್ಟ. ಗ್ರಾಮ ಪಂಚಾಯಿತಿಯಿಂದ ಕಸವಿಲೇವಾರಿಗೊಳಿಸಲು ಬದಲಿ ವಾಹನಗಳನ್ನು ಖರೀದಿಸಲು ಅನುದಾನ ಒದಗಿಸಿಕೊಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಅವರು ಮನವಿ ಮಾಡಿದರು.

ಪಟ್ಟಣದಲ್ಲಿ ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಜನರೇ ಅಧಿಕವಾಗಿ ನೆಲೆಸಿದ್ದಾರೆ. ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿ 275 ಹಾದು ಹೋಗಿದ್ದು, ನಿತ್ಯ ನೂರಾರು ಪ್ರವಾಸಿ ವಾಹನಗಳು ಸೇರಿದಂತೆ ಭಾರಿ ವಾಹನಗಳು ಈ ಹೆದ್ದಾರಿಯ ಮೂಲಕವೇ ಸಂಚರಿಸುತ್ತವೆ. ಈ ಹೆದ್ದಾರಿಯು ಹಲವು ತಿರುವುಗಳಿಂದ ಕೂಡಿದ್ದು ಆಗಾಗ್ಗೆ ವಾಹನ ಅಪಘಾತಗಳು ಸಂಭವಿಸುತ್ತಿವೆ. ಈ ಸಂದರ್ಭದಲ್ಲಿ ಗಾಯಳುಗಳಿಗೆ ಚಿಕಿತ್ಸೆ ನೀಡಲು ಕಷ್ಟ ಪಡುವಂತಾಗಿದೆ. ನಿತ್ಯ ನೂರಾರು ಹೊರ ರೋಗಿಗಳು ಚಿಕಿತ್ಸೆಗಾಗಿಯೂ ಆಗಮಿಸುತ್ತಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನುರಿತ ವೈದ್ಯಾಧಿಕಾರಿಗಳು ಇಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೂರ್ಣಾವಧಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಯನ್ನು ನಿಯೋಜನೆಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರಾದ ಪಿ.ಎಫ್.ಸಬಾಸ್ಟೀನ್, ಮಂಜುಳಾ (ರಾಸಥಿ) ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.