ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ: ಅರಣ್ಯ ಇಲಾಖೆಯ 61 ಹುತಾತ್ಮರಿಗೆ ಗೌರವ ಸಲ್ಲಿಕೆ

Published : 11 ಸೆಪ್ಟೆಂಬರ್ 2024, 4:57 IST
Last Updated : 11 ಸೆಪ್ಟೆಂಬರ್ 2024, 4:57 IST
ಫಾಲೋ ಮಾಡಿ
Comments

ಮಡಿಕೇರಿ: ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಇಲ್ಲಿನ ಅರಣ್ಯ ಭವನದಲ್ಲಿ ಬುಧವಾರ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಡಿಸಿಎಫ್ ಭಾಸ್ಕರ್ ಅವರು ಇಲಾಖೆಯ 61 ಹುತಾತ್ಮರನ್ನು ಸ್ಮರಿಸಿದರು. ಪೊಲೀಸ್ ವಾದ್ಯ ವೃಂದವು ಅಬೈಡ್ ವಿತ್ ಮಿ ಹಾಗೂ ಲಾಸ್ಟ್ ಪೋಸ್ಟ್ ಗಾಯನದ ಮೂಲಕ ಗೌರವ ಸಮರ್ಪಿಸಿತು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ ವನ್ಯಜೀವಿ - ಮಾನವ ಸಂಘರ್ಷ ದಿನೇ ದಿನೇ ಹೆಚ್ಚುತ್ತಿರುವ ಈ ಹೊತ್ತಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸದಾ ಅಪಾಯದಲ್ಲೆ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಟಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT