ಸೋಮವಾರಪೇಟೆ: ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೆ. 11ರಂದು ಚುನಾವಣೆ ನಿಗದಿಯಾಗಿದ್ದು, ಎರಡೂ ಸ್ಥಾನಗಳು ಮಹಿಳೆಗೆ ಮೀಸಲಾಗಿವೆ.

ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ನಾಲ್ವರ ನಡುವೆ ಪ್ರಬಲ ಪೈಪೋಟಿ ಇದೆ. ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಸದಸ್ಯೆ ಮೋಹಿನಿ ಹೊರತುಪಡಿಸಿ ಉಳಿದವರು ಕಣದಲ್ಲಿಲ್ಲ. ಆದಾಗ್ಯೂ, ಅವರೂ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

ಜೆಡಿಎಸ್‌ನಿಂದ ಗೆಲುವು ದಾಖಲಿಸಿ, ಈಗಾಗಲೇ ಬಿಜೆಪಿಗೆ ಸೇರಿರುವ ನಾಗರತ್ನ ಅವರು ಅಧ್ಯಕ್ಷರಾಗುವ ಅವಕಾಶ ಹೆಚ್ಚಾಗಿದೆ ಎಂದು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗುತ್ತಿದೆ. ಮತ್ತೊಂದೆಡೆ, ಜೆಡಿಎಸ್‌ನಿಂದ ಗೆಲುವು ದಾಖಲಿಸಿದ್ದ ಜಯಂತಿ ಶಿವಕುಮಾರ್ ಕೂಡ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜೊತೆಗೆ, ಮೋಹಿನಿ ಸಹ ಸ್ಪರ್ಧಿಸುವ ಇಚ್ಛೆ ಹೊಂದಿದ್ದಾರೆ. ಮೈತ್ರಿಕೂಟದ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಎಂಬುದನ್ನು ಕಾದುನೋಡಬೇಕಿದೆ. ಈ ಮಧ್ಯೆ ಕಾಂಗ್ರೆಸ್ ಹಿರಿಯ ಸದಸ್ಯೆ ಶೀಲಾ ಡಿಸೋಜ ಸಹ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಹೀಗಾಗಿ, ಚುನಾವಣಾ ಕಣ ಭಾರಿ ಕುತೂಹಲ ಕೆರಳಿಸಿದೆ.

11 ಸದಸ್ಯ ಬಲದ ಪಟ್ಟಣ ಪಂಚಾಯಿತಿಗೆ 2018ರಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿಯಿಂದ 3, ಕಾಂಗ್ರೆಸ್‌ನಿಂದ 4, ಜೆಡಿಎಸ್‌ನಿಂದ 3 ಹಾಗೂ ಒಬ್ಬರು ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದರು. ಪ್ರಥಮ ಅವಧಿಯಲ್ಲಿ ಬಿಜೆಪಿಯ ನಳಿನಿ ಗಣೇಶ್ ಆಯ್ಕೆಯಾಗಿದ್ದರು. ಕೋವಿಡ್ ಸಂದರ್ಭದಲ್ಲಿ ಅವರು ನಿಧನರಾಗಿದ್ದರಿಂದ ಬಿಜೆಪಿಯ ಪಿ.ಕೆ.ಚಂದ್ರು ಅಧ್ಯಕ್ಷರಾದರು. ಈ ವೇಳೆ ತೆರವಾದ ನಳಿನಿ ಗಣೇಶ್ ಅವರ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಅವರು ಸೊಸೆ ಮೋಹಿನಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌ನ ಉದಯಶಂಕರ್ ನಿಧನರಾಗಿದ್ದರಿಂದ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಮೃತ್ಯುಂಜಯ ಗೆಲುವು ಸಾಧಿಸಿ ಬಿಜೆಪಿಯ ಸದಸ್ಯರ ಸಂಖ್ಯೆ 4ಕ್ಕೆ ಏರಿಕೆಯಾಯಿತು. ಈ ಮಧ್ಯೆ ಪಕ್ಷೇತರ ಸದಸ್ಯ ಶುಭಕರ್ ಬಿಜೆಪಿಗೆ ಬೆಂಬಲ ಸೂಚಿಸಿದ್ದರು.

ನಂತರ, ಜೆಡಿಎಸ್‌ನಿಂದ ಆಯ್ಕೆಯಾಗಿದ್ದ ನಾಗರತ್ನ ಹಾಗೂ ಜೀವನ್ ಅವರೂ ಬಿಜೆಪಿಗೆ ಸೇರ್ಪಡೆಯಾಗಿದ್ದರಿಂದ ಬಿಜೆಪಿ ಕೋಟೆ ಇನ್ನಷ್ಟು ಬಲಗೊಂಡಿತು.

ಬಿಜೆಪಿಯಿಂದ ಇಬ್ಬರು, ಕಾಂಗ್ರೆಸ್, ಜೆಡಿಎಸ್‌ನಿಂದ ತಲಾ ಒಬ್ಬರು ಕಣದಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಇಲ್ಲ ಹೆಚ್ಚಿನ ಪೈಪೋಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.