ಸೋಮವಾರಪೇಟೆ: ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಅಭಿವೃದ್ಧಿಪಡಿಸಿ, ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂಶ್ರೀ ಯೋಜನೆ’ಗೆ ಇಲ್ಲಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.

ಶಾಲೆಯಲ್ಲಿ 430 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್ಕೆಜಿ ಯಿಂದ 8ನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಪಿಎಂಶ್ರೀ ಯೋಜನೆಯಡಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ₹50 ಲಕ್ಷ ಅನುದಾನ ನೀಡುತ್ತದೆ. ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಯಶೋಧಾ ತಿಳಿಸಿದ್ದಾರೆ.

ಯೋಜನೆ 5 ವರ್ಷಗಳ ಅವಧಿ ಹೊಂದಿದ್ದು, ಪ್ರಸಕ್ತ ವರ್ಷ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ, ಪೀಠೋಪಕರಣಗಳು, ಆಟ– ಪಾಠದ ಸಾಮಗ್ರಿಗಳು, ಸ್ಮಾರ್ಟ್ ಬೋರ್ಡ್, ಪ್ರಯೋಗಾಲಯ , ಶೌಚಾಲಯಗಳ ನಿರ್ಮಾಣಕ್ಕೆ ಕ್ರಿಯಾ ಯೋಜನೆ ತಯಾರಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.