ಮಡಿಕೇರಿ: ‘ರಾಜ್ಯದಲ್ಲೇ ಕೊಡಗು ಜಿಲ್ಲೆಯ ಸಹಕಾರ ಕ್ಷೇತ್ರ ಅತ್ಯಂತ ಬಲಿಷ್ಠವಾಗಿದೆ. ಆದರೂ, ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ನೀಡುವ ವೇಳೆ ಕೊಡಗು ಜಿಲ್ಲೆಯನ್ನು ನಿರ್ಲಕ್ಷಿಸಲಾಗುತ್ತಿದೆ’ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ, ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಸ್ಥಳೀಯ ಸಹಕಾರ ಸಂಘಗಳ ವತಿಯಿಂದ ನಗರದ ಬಾಲಭವನದಲ್ಲಿ ಬುಧವಾರ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನೀಡುವ ‘ಕೊಡಗಿನ ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಹಕಾರ ಕ್ಷೇತ್ರದಲ್ಲಿ ಯಾರೂ ಮೂಗು ತೂರಿಸಬಾರದು ಎಂದು ಹೇಳುತ್ತಾರೆ. ಆದರೆ, ಎಲ್ಲ ರಂಗದಲ್ಲಿಯೂ ಒಂದಲ್ಲ ಒಂದು ರೀತಿಯ ರಾಜಕಾರಣ ಇರುತ್ತದೆ. ಇದರಿಂದ ಯಾವುದೇ ರಂಗ ಹೊರತಾಗಿಲ್ಲ. ಇದರ ನಡುವೆಯೂ ಹಿಂದಿನವರು ಕಟ್ಟಿಕೊಂಡು ಬಂದಿರುವ ಸಹಕಾರ ಕ್ಷೇತ್ರವನ್ನು ಬಲಪಡಿಸುವುದು ಅತ್ಯವಶ್ಯಕ’ ಎಂದು ಪ್ರತಿಪಾದಿಸಿದರು.

‘ಸಹಕಾರ ಕ್ಷೇತ್ರದಲ್ಲಿ ಹಿರಿಯರು ಫಲಾಪೇಕ್ಷೆ ಇಲ್ಲದೆ ಸಹಕಾರ ಸಂಘಗಳನ್ನು ಉಳಿಸಿ– ಬೆಳೆಸಿಕೊಂಡು ಬಂದಿರುವುದಕ್ಕೆ ಕೃತಜ್ಞತೆ ಸಲ್ಲಿಸಬೇಕು. ಸಹಕಾರ ಸಂಘಗಳಲ್ಲಿ ದುಡಿಯುತ್ತಿರುವವರಲ್ಲಿ ಯಾವುದೇ ರೀತಿಯ ಸ್ವಾರ್ಥ ಇರಬಾರದು. ಸ್ವಾರ್ಥ ಇದ್ದಲ್ಲಿ ಸಹಕಾರ ಸಂಘಗಳನ್ನು ಅಭಿವೃದ್ಧಿ ಪಡಿಸಲು ಸಾಧ್ಯವಿಲ್ಲ’ ಎಂದರು.

ಕೆಐಸಿಎಂನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ.ಶ್ಯಾಮಲಾ ಅವರು ಸಹಕಾರ ಕ್ಷೇತ್ರದ ಮಹತ್ವ ಕುರಿತು ಮಾತನಾಡಿದರು.

ಕೊಡಗು ಜಿಲ್ಲೆಯ ಶ್ರೇಷ್ಠ ಸಹಕಾರಿ ಪ್ರಶಸ್ತಿಯನ್ನು ಮಡಿಕೇರಿ ತಾಲ್ಲೂಕಿನ ನಂದಿನೆರವಂಡ ರವಿ ಬಸಪ್ಪ, ವಿರಾಜಪೇಟೆ ತಾಲ್ಲೂಕಿನ ಕಾಯಪಂಡ ಬಿ. ಟಾಟಾ ಚಂಗಪ್ಪ, ಸೋಮವಾರಪೇಟೆ ತಾಲ್ಲೂಕಿನ ಪಾಸುರ ಎನ್.ಉತ್ತಪ್ಪ, ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿಯನ್ನು ಸರಸು ಪೊನ್ನಪ್ಪ ಅವರಿಗೆ ಪ್ರದಾನ ಮಾಡಲಾಯಿತು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷ ಪಟ್ಟಡ ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಪಿ.ಸಿ.ಅಚ್ಚಯ್ಯ, ಪ್ರೇಮ ಸೋಮಯ್ಯ, ಕೋಡಿರ ಎಂ.ತಮ್ಮಯ್ಯ, ವಿ.ಕೆ.ಅಜಯ್ ಕುಮಾರ್, ಪಿ.ಬಿ.ಯತೀಶ್, ಎ.ಎಸ್.ಶ್ಯಾಮ್ ಚಂದ್ರ, ಎನ್.ಎ.ರ್ಯಾಲಿ ಮಾದಯ್ಯ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕಿ ಎಂ.ಎನ್.ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶೈಲಜಾ, ಮಂಜುಳಾ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ ಭಾಗವಹಿಸಿದ್ದರು.

‘ಕೊಡಗು ಸಹಕಾರಿ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿರುವ ಬಿ.ಡಿ.ಮಂಜುನಾಥ್ ಅವರು ಗೈರಾಗಿದ್ದರು. ಪ್ರಶಸ್ತಿಯನ್ನು ಅವರ ಮನೆಯಲ್ಲೇ ಪ್ರದಾನ ಮಾಡಲಾಗುವುದು ಎಂದು ಸಭೆಯಲ್ಲಿ ಪ್ರಕಟಿಸಲಾಯಿತು.

ಕೊಡಗು ಜಿಲ್ಲೆಯಲ್ಲಿ ಸಹಕಾರ ಸಂಘಗಳನ್ನು ಹಿರಿಯರು ಉಳಿಸಿ ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಅಂತರ ಸಹಕಾರ ಸಂಘಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು

–ರಾಣಿ ಮಾಚಯ್ಯ ಹಿರಿಯ ಸಹಕಾರಿ ಕಲಾವಿದೆ

ಸಹಕಾರ ಕ್ಷೇತ್ರದಲ್ಲಿ ದುಡಿದವರನ್ನು ಗುರುತಿಸಿ ಗೌರವಿಸುವುದು ಅತ್ಯಗತ್ಯ. ಈ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವಲ್ಲಿ ಎಲ್ಲರೂ ಶ್ರಮಿಸಬೇಕು

–ನಾಪಂಡ ಉಮೇಶ್ ಉತ್ತಪ್ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ

‘ಆರ್ಥಿಕ ಚಟುವಟಿಕೆ ಹೆಚ್ಚಾಗಲಿ’

ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್ ಕುಮಾರ್ ‘ಸಹಕಾರ ಸಂಘಗಳ ಮೂಲಕ ಗ್ರಾಮ ಮಟ್ಟದಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಬೇಕು. ಸಹಕಾರ ಸಂಘಗಳ ಬೆಳವಣಿಗೆಗೆ ಹಿರಿಯರು ಸಾಕಷ್ಟು ತ್ಯಾಗ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ‘ಧವಸ ಭಂಡಾರ’ ಸಹಕಾರ ಸಂಘಗಳನ್ನು ಸಹ ಸ್ಥಾಪಿಸಿ ಆಹಾರ ಭದ್ರತೆಯ ಪರಿಕಲ್ಪನೆಯ ಮಹತ್ವ ಸಾರಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.