ಸೋಮವಾರಪೇಟೆ: ತಾಲ್ಲೂಕಿನ ಶಾಂತಳ್ಳಿ ಹೋಬಳಿಯ ತಲ್ತರೆಶೆಟ್ಟಳ್ಳಿ- ಅಭಿಮಠ ಗ್ರಾಮದ ಚೌಡೇಶ್ವರಿ ಯೂತ್ ಕ್ಲಬ್ ವತಿಯಿಂದ ಸರ್ಕಾರಿ ಶಾಲಾ ಮೈದಾನದಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ ಮಹಿಳೆಯರ ಎರಡನೇ ವರ್ಷದ ಥ್ರೋಬಾಲ್ ಪಂದ್ಯಾಟದಲ್ಲಿ ಸೋಮವಾರಪೇಟೆಯ ಭಾಗ್ಯ ಫ್ರೆಂಡ್ಸ್ ತಂಡ ಪ್ರಥಮ ಸ್ಥಾನ ಪಡೆಯಿತು.

ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ ವಿರಾಜಪೇಟೆಯ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಪ್ರಥಮ ಸ್ಥಾನ ಪಡೆದ ತಂಡಕ್ಕೆ ₹ 7,777 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಗಳಿಸಿದ ತಂಡಕ್ಕೆ ₹ 4,444 ನಗದು ಹಾಗೂ ಟ್ರೋಫಿ ನೀಡಲಾಯಿತು.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಚಂಗಪ್ಪ, ಚೌಡೇಶ್ವರಿ ಯೂತ್ ಕ್ಲಬ್ ಅಧ್ಯಕ್ಷ ರವಿ, ಪ್ರಮುಖರಾದ ಮುತ್ತಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.