ಸುಂಟಿಕೊಪ್ಪ: ಸಮೀಪದ ಪನ್ಯ ತೋಟದ ಮಾರಿಗುಡಿ ಬಳಿಯ ಕಾಫಿ ತೋಟದಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಬೆಳೆಗಾರ ಸಂದೇಶ್ ಅವರಿಗೆ ಸೇರಿದ ಕಾಫಿ ತೋಟದಲ್ಲಿ ಸುಮಾರು 45ರ ಪ್ರಾಯದ ಅಪರಿಚಿತ ಗಂಡಸಿನ ದೇಹವು ಸುಟ್ಟು ಕರಕಲಾದ ಸ್ಥಿತಿಯಲ್ಲಿ 1 ಕಾಲು ಹಾಗೂ ಇತರೆ ಭಾಗಗಳು ಪತ್ತೆಯಾಗಿವೆ.

ತೋಟದ ಮಾಲೀಕರು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಪಿಎಸ್ಐ ಚಂದ್ರಶೇಖರ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಡಿವೈಎಸ್ಪಿ ಗಂಗಾಧರಪ್ಪ, ಕುಶಾಲನಗರ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ರಾಜೇಶ್ ಕೋಟ್ಯಾನ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

‘ಇದು ನಾಲ್ಕೈದು ದಿನಗಳ ಹಿಂದೆ ನಡೆದ ಘಟನೆಯಾಗಿದೆ. ಸಾವಿನ ಬಗ್ಗೆ ಮೇಲ್ನೋಟಕ್ಕೆ ಸಂಶಯವಿದ್ದು, ಘಟನಾ ಸ್ಥಳದಲ್ಲಿ ಕೆಲವೊಂದು ಮಾಹಿತಿ ಸಿಕ್ಕಿದ್ದು, ನುರಿತ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಲಿದೆ. ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಶೀಘ್ರವೇ ಬಂಧಿಸಲಾಗುವುದು’ ಎಂದು ಎಸ್ಪಿ ಕೆ.ರಾಮರಾಜನ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.