ಕುಶಾಲನಗರ: ಸಮೀಪದ ಬಾಳುಗೋಡು ಗ್ರಾಮದಲ್ಲಿ ಮನೆಯ ಹಿಂಬಾಗಿಲಿನಿಂದ ಪ್ರವೇಶಿಸಿ ಬೀರುವಿನಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ರಂಗಸಮುದ್ದಲ್ಲಿ ವಾಸವಿದ್ದ ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (33 ವರ್ಷ) ಎಂಬಾತ ಬಂಧಿಸಿ ವ್ಯಕ್ತಿ. ಈತ ಬಾಳಗೋಡು ನಿವಾಸಿ ಶರೀಫ್ ಎಂಬುವವರ ಮನೆಗೆ ನುಗ್ಗಿ ₹5 ಸಾವಿರ ನಗದು, 47 ಗ್ರಾಂ ಚಿನ್ನಾಭರಣ ಹಾಗೂ 200 ಗ್ರಾಂ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡು ಆರೋಪಿ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತನಿಂದ ₹1 ಸಾವಿರ ನಗದು, 47 ಗ್ರಾಂ ಚಿನ್ನಾಭರಣ ಹಾಗೂ 200 ಗ್ರಾಂ ಬೆಳ್ಳಿ ಆಭರಣ ವಶಪಡಿಸಿಕೊಳ್ಳಲಾಗಿದೆ.

ಸೈಫುಲ್ ಇಸ್ಲಾಂ ಅಸ್ಸಾಂ ರಾಜ್ಯದ ಬುರಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣ ಹಾಗೂ ಮರಿಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕಳವು ಮತ್ತು ನಿಷೇಧಿತ ಮಾದಕ ವಸ್ತುಗಳ ಸರಬರಾಜು, ಮಾರಾಟ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯಾಗಿದ್ದಾನೆ.

ಕಾರ್ಯಾಚಾರಣೆಯಲ್ಲಿ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ವೃತ್ತ ನಿರೀಕ್ಷಕ ರಾಜೇಶ್.ಕೆ, ಗ್ರಾಮಾಂತರ ಠಾಣಾಧಿಕಾರಿ ಮೋಹನ್ ರಾಜು, ಕೆ.ಎಚ್.ಭಾರತಿ ಹಾಗೂ ಸಿಬ್ಬಂದಿಗಳು ಇದ್ದರು. ಇವರಿಗೆ ಎಸ್ಪಿ ರಾಮರಾಜನ್ ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.