ಮಡಿಕೇರಿ: ‘ಕೇರಳದ ವಯನಾಡ್ನಲ್ಲಿ ಸಂಭವಿಸಿದಂತಹ ದುರಂತ ಎಲ್ಲಿ ಬೇಕಾದರೂ ಸಂಭವಿಸಬಹುದು. ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಅಪಾಯಕಾರಿ ಸ್ಥಳಗಳಲ್ಲಿ ವಾಸಿಸುತ್ತಿರುವವರು ಸ್ವಯಂಪ್ರೇರಣೆಯಿಂದ ಸ್ಥಳಾಂತರವಾಗಬೇಕು. ಇಲ್ಲದಿದ್ದರೆ, ಜಿಲ್ಲಾಡಳಿತ ನಿಷ್ಠುರವಾಗಿ ಸ್ಥಳಾಂತರ ಮಾಡಬೇಕು. ಜೀವ ಹೋದ ನಂತರ ಪರಿಹಾರ ನೀಡುವುದಕ್ಕಿಂತ ಜೀವ ಉಳಿಸುವುದು ನಮ್ಮ ಉದ್ದೇಶವಾಗಬೇಕು’ ಎಂದು ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿತದಂತಹ ಘಟನೆಗಳು ಸಂಭವಿಸುವಂತಹ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಬುಧವಾರ ಜಿಲ್ಲೆಗೆ ಆಗಮಿಸಿದ್ದ ಇಬ್ಬರೂ ಸಚಿವರು ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ರಸ್ತೆ, ಸೇತುವೆ, ವಿದ್ಯುತ್ ಕಂಬ ಮತ್ತು ಪರಿವರ್ತಕಗಳು, ಬೆಳೆ ಹಾಗೂ ಮನೆ ಹಾನಿ ಹೀಗೆ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಬಗ್ಗೆ ಮಾಹಿತಿ ಪಡೆದ ಅವರು, ಜುಲೈನಲ್ಲಿ ಹೆಚ್ಚಿನ ಮಳೆಯಾಗಿದೆ. ಆಗಸ್ಟ್ನಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಹಾಗಾಗಿ, ಕಟ್ಟೆಚ್ಚರ ವಹಿಸುವಂತೆ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ ಬೈರೇಗೌಡ, ‘ಕೊಡಗು ಜಿಲ್ಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡ, ಸಿವಿಲ್ ಪೊಲೀಸ್ ತಂಡಗಳನ್ನು ರಕ್ಷಣೆಗಾಗಿ ನಿಯೋಜಿಸಲಾಗಿದೆ’ ಎಂದು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಪ್ರದೇಶವನ್ನು ಜಿಯೊಲಾಜಿಕಲ್ ಸರ್ವೇ ಆಫ್ ಇಂಡಿಯಾ (ಜಿಎಸ್ಐ) ತಾಂತ್ರಿಕ ಸಂಸ್ಥೆ ಅಧ್ಯಯನ ಮಾಡಿ ವರದಿ ನೀಡಿದ್ದು, ಗುಡ್ಡ ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹ 100 ಕೋಟಿ ಮಂಜೂರು ಮಾಡಿದ್ದಾರೆ. ಮುಂದಿನ ವರ್ಷ ₹ 200 ಕೋಟಿ ಬಿಡುಗಡೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ಮಳೆ ಹಾನಿ ಪ್ರದೇಶಗಳಿಗೆ ಸಚಿವರ ಭೇಟಿ, ಪರಿಶೀಲನೆ

ಇಬ್ಬರೂ ಸಚಿವರು ಶಾಸಕ ಡಾ.ಮಂತರ್ಗೌಡ ಅವರೊಂದಿಗೆ ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ವೀಕ್ಷಿಸಿದರು.

ಕುಶಾಲನಗರ ತಾಲ್ಲೂಕಿನ ಹಾರಂಗಿ ಬಳಿಯ ಅತ್ತೂರು ಗ್ರಾಮ, ಮಡಿಕೇರಿ -ಕುಟ್ಟ ಮುಖ್ಯ ರಸ್ತೆ ಮಂಚಳ್ಳಿ ಹತ್ತಿರ ಮಳೆಯಿಂದ ಕುಸಿದು ಹಾನಿಯಾದ ಸ್ಥಳಗಳನ್ನು ಪರಿಶೀಲಿಸಿದರು.

ವಿರಾಜಪೇಟೆ ತಾಲ್ಲೂಕು ಸಿದ್ದಾಪುರ ಸ್ವರ್ಣಮಾಲ ಕಲ್ಯಾಣ ಮಂಟಪ ಹಾಗೂ ವಾಲ್ನೂರು ತ್ಯಾಗತ್ತೂರು ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ಥರ ಯೋಗ ಕ್ಷೇಮ ವಿಚಾರಿಸಿದರು.

ಅತ್ತೂರಿನಲ್ಲಿ ಮನೆ ಕಳೆದುಕೊಂಡ ಕುಟುಂಬಕ್ಕೆ ಸಾಂತ್ವನ

ಕುಶಾಲನಗರ: ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅತ್ತೂರು ಗ್ರಾಮಕ್ಕೆ ಭೇಟಿ ನೀಡಿದ ಸಚಿವರು ಮಳೆಗೆ ಹಾನಿಯಾಗಿರುವ ವಾಸದ ಮನೆಯನ್ನು ವೀಕ್ಷಣೆ ಮಾಡಿ ಕುಟುಂಬದವರಿಗೆ ಧೈರ್ಯ ಹೇಳಿದರು. ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.

ಹಾನಿಯಾದ ಮನೆಗಳಿಗೆ ಹಾಗೂ ಸ್ವತ್ತುಗಳಿಗೆ ಅಗತ್ಯ ನೆರವು ನೀಡುವಂತೆ ಹಾಗೂ ಪ್ರಾಣ ಹಾನಿ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಇದೆ ಸಂಧರ್ಭದಲ್ಲಿ ಸಚಿವರು ಸೂಚನೆ ನೀಡಿದರು. ಗುಡ್ಡೆಹೊಸೂರು ಬಳಿಯ ತೆಪ್ಪದಕಂಡಿಗೆ ಭೇಟಿ ನೀಡಿ ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಿದರು.

ಶಾಸಕ ಡಾ.ಮಂತರ್ಗೌಡ ಮಾತನಾಡಿ ‘ಸರ್ಕಾರ ಸಂತ್ರಸ್ತರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲಿದ್ದು ಯಾರೂ ಸಹ ಆತಂಕಕ್ಕೆ ತುತ್ತಾಗಬಾರದು. ನಿಮ್ಮ ನೆರವಿಗೆ ಸರ್ಕಾರ ಸದಾ ಸಿದ್ಧವಿದೆ. ಆ ನಿಟ್ಟಿನಲ್ಲಿ ಧೈರ್ಯದಿಂದ ಬದುಕು ಕಟ್ಟಿಕೊಳ್ಳುವತ್ತ ಮುನ್ನಡೆಯಬೇಕು’ ಎಂದು ಹೇಳಿದರು.

ಈ ವೇಳೆ ಶಾಸಕ ಡಾ.ಮಂತರ್ಗೌಡ ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ತಹಶಿಲ್ದಾರ ಕಿರಣ್ ಗೌರಯ್ಯ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಸಹಾಯಕ ಎಂಜಿನಿಯರ್ ಸಿದ್ದರಾಜು ಕಿರಣ್ ಸೌಮ್ಯಾ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಗುಡ್ಡೆಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರುಕ್ಮಿಣಿ ಹಾಗೂ ಸದಸ್ಯರು ಮುಖಂಡರಾದ ಕೆ.ಎಂ.ಲೋಕೇಶ್ ಯಾಕುಬ್ ಚಂದ್ರಶೇಖರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.