ಕುಶಾಲನಗರ: ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರೂರು ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಹುಲಸೆ ಸಮೀಪದ ಹಾಸನ ಹೆದ್ದಾರಿಯ ಮುಖ್ಯ ರಸ್ತೆಯಿಂದ ಮರೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಈ ರಸ್ತೆಯು ತೀರಾ ಹಾಳಾಗಿದ್ದು ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ತಿರುಗಾಡಲು ಸಾಧ್ಯವಾಗದಂತಹ ಸ್ಥಿತಿಯಲ್ಲಿದೆ. ಮಳೆಯಿಂದಾಗಿ ಮತ್ತಷ್ಟು ಹಾಳಾಗಿದ್ದು ಸರಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮರೂರು ಗ್ರಾಮ ಮತ್ತು ಹೆದ್ದಾರಿಯ ಮುಖ್ಯ ರಸ್ತೆಯ ಸಂಪರ್ಕ ರಸ್ತೆಯಾಗಿರುವ ಹಿನ್ನೆಲೆಯಲ್ಲಿ ದುರಸ್ತಿಗೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಮತ್ತು ಸಂಬಂಧಿಸಿದ ಇಲಾಖೆಯವರಿಗೆ ಪತ್ರವ್ಯವಹಾರ ಮಾಡಿದರೂ ಇದುವರೆಗೂ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಇದೀಗ ಅತಿಯಾದ ಮಳೆಯಿಂದಾಗಿ ರಸ್ತೆಯು ತೀರಾ ಕೆಸರು ಮಯವಾಗಿ ತಿರುಗಾಡಲು ತೊಂದರೆಯಾಗುತ್ತಿದ್ದು ಸಂಬಂಧಿಸಿದವರು ತುರ್ತಾಗಿ ಕ್ರಮ ವಹಿಸುವಂತೆ ಗ್ರಾಮಸ್ಥರಾದ ಚೆಲುವರಾಜ್, ರಮೇಶ್, ಲೋಕೇಶ್, ದಿನೇಶ್, ಮಂಜುನಾಥ್, ರಾಮಸ್ವಾಮಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.