ಮಡಿಕೇರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂದರ್ಭದಲ್ಲಿ ಜಿಲ್ಲೆಯ ಯಾವ ಯಾವ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲಾಗಿದೆ ಎಂಬ ಬಗ್ಗೆ ನಿಖರ ಕಾರಣವನ್ನು ಬಹಿರಂಗಪಡಿಸಬೇಕು ಎಂದು ಕಂದಾಯ ಅಧಿಕಾರಿಗಳಿಗೆಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕ ವಿ.ಅನ್ಬುಕುಮಾರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ‘ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ’ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಕಾರ್ಯ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.

ಈಗಾಗಲೇ ನ. 9ರಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆದಿದ್ದು, ಈ ಸಂದರ್ಭದಲ್ಲಿ ಪ್ರತೀ ಮತಗಟ್ಟೆವಾರು ವಿವಿಧ ಕಾರಣಗಳಿಂದ (ನಿಧನ ಹೊಂದಿರುವವರು, ವಲಸೆ ಹೋಗಿರುವವರು) ಮತದಾರರ ಪಟ್ಟಿಯಿಂದ ಹೆಸರು ತೆಗೆದಿರುವ ಬಗ್ಗೆ ಕಾರಣ ತಿಳಿಸಬೇಕು. ಜೊತೆಗೆ ಕುಟುಂಬದವರಿಗೆ ಮಾಹಿತಿ ನೀಡಬೇಕು. ಈ ಸಂಬಂಧ ನೋಂದಣಿ ಅಂಚೆ ಮೂಲಕ ಪತ್ರ ಕಳುಹಿಸಬೇಕು ಎಂದು ಹೇಳಿದರು.

‘ಮತದಾನದ ಸಂದರ್ಭದಲ್ಲಿ ಯಾರೂ ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟು ಹೋಗಿದೆ ಎಂಬ ದೂರು ಬಾರದಂತೆ ಎಚ್ಚರ ವಹಿಸಬೇಕು. ಆದ್ದರಿಂದ ಪ್ರತೀ ಮತಗಟ್ಟೆಗೆ ಎಲ್ಲಾ ಹಂತದ ಅಧಿಕಾರಿಗಳು ತೆರಳಿ ಮತಗಟ್ಟೆ ಅಧಿಕಾರಿಗಳಿಂದ ಸ್ಪಷ್ಟ ಮಾಹಿತಿ ಪಡೆದು ಪರಿಶೀಲಿಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.