ಸೋಮವಾರಪೇಟೆ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಜೆಗುಂಡಿ ಗ್ರಾಮದ ರಾಜ್ಯ ಹೆದ್ದಾರಿ ಪಕ್ಕದಲ್ಲಿಯೇ ಕಸ ಸುರಿಯುತ್ತಿರುವ ಸ್ಥಳೀಯ ಮಹಿಳೆ.
ಸೋಮವಾರಪೇಟೆ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಜೆಗುಂಡಿ ಗ್ರಾಮದ ರಾಜ್ಯ ಹೆದ್ದಾರಿ ಪಕ್ಕದಲ್ಲಿಯೇ ಕಸ ಸುರಿದಿರುವುದು.
ಸೋಮವಾರಪೇಟೆ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಜೆಗುಂಡಿ ಗ್ರಾಮದಲ್ಲಿ ಕಸ ವಿಲೇವಾರಿಗೆ ಕಟ್ಟಡ ನಿರ್ಮಾಣವಾಗುತ್ತಿದ್ದು ಸ್ಥಳಕ್ಕೆ ಜಿ.ಪಂ ಉಪ ಕಾರ್ಯದರ್ಶಿ ಜಿ. ಧನರಾಜು ಭೇಟಿ ನೀಡಿ ಕಾಮಗಾರಿ ವೀಕ್ಷಣ ಮಾಡಿದರು.
ಒಂದು ವಾರದಲ್ಲಿ ಕಟ್ಟಡ ಹಸ್ತಾಂತರ; ಪಿಡಿಒ ರವಿ
ತ್ಯಾಜ್ಯ ವಿಲೇವಾರಿ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಬೇಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ‘ಗ್ರಾಮದ ಸ್ಮಶಾನದ ಬಳಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸೂಕ್ತ ಸ್ಥಳ ಗುರುತಿಸಿ ₹ 11.5 ಲಕ್ಷದ ಕಟ್ಟಡ ನಿರ್ಮಾಣವಾಗುತ್ತಿದ್ದು ಮುಂದಿನ ಒಂದು ವಾರದಲ್ಲಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಗೊಳ್ಳಲಿದೆ. ಬಳಿಕ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುವುದು’ ಎಂದು ಹೇಳಿದರು. ಕಟ್ಟಡ ನಿರ್ಮಾಣದ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಿ.ಧನರಾಜು ಭೇಟಿ ನೀಡಿ ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು. ಗ್ರಾಮದ ಜನರಿಗೆ ಎಷ್ಟೇ ಮಾಹಿತಿ ನೀಡಿದರೂ ಕಸವನ್ನು ರಸ್ತೆ ಪಕ್ಕದಲ್ಲಿಯೇ ಸುರಿಯುತ್ತಿದ್ದಾರೆ. . ಈಗಾಗಲೇ ಎಲ್ಲ ಮನೆಗಳಿಗೆ ತ್ಯಾಜ್ಯ ಸಂಗ್ರಹಿಸಲು ಬಕೆಟ್ ನೀಡಲಾಗಿದೆ. ಒಂದು ವಾರದ ನಂತರ ಮನೆ ಮನೆಗೆ ಪಂಚಾಯಿತಿ ವಾಹನ ತೆರಳಿ ಕಸ ಸಂಗ್ರಹಿಸಿ ವಿಲೇವಾರಿಗೆ ಮುಂದಾಗಲಾಗುವುದು. ನಂತರವೂ ರಸ್ತೆ ಬದಿಯಲ್ಲಿ ಕಸ ಸುರಿದಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.