ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಕಂಡಂಗಾಲ ಗ್ರಾಮದ ಬಳಿ 35 ವರ್ಷದ ಗಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆ ಹಿಡಿದರು. ಈ ಆನೆಯು ಕಳೆದ ಹಲವು ತಿಂಗಳುಗಳಿಂದ ಈ ಭಾಗದಲ್ಲಿ ಕೃಷಿ ಭೂಮಿಯ ಮೇಲೆ ದಾಳಿ ನಡೆಸಿ, ಬೆಳೆಗಳನ್ನು ನಾಶಪಡಿಸಿತ್ತು. ಇದರ ಸೆರೆಗೆ ಭಾನುವಾರ ಬೆಳಿಗ್ಗೆಯಿಂದಲೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಅಭಿಮನ್ಯು, ಪ್ರಶಾಂತ, ಹರ್ಷ ಸೇರಿದಂತೆ 4 ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ನಡೆಸಿದ್ದರು. ಮಧ್ಯಾಹ್ನದ ವೇಳೆಗೆ ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಸೆರೆ ಹಿಡಿದು, ರೇಡಿಯೊ ಕಾಲರ್ ಅಳವಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.