ಸಿದ್ದಾಪುರ: ‘ಪರಿಸರ ಪ್ರವಾಸೋದ್ಯಮದಲ್ಲಿ ಜಿಲ್ಲೆ ವಿಶ್ವದಲ್ಲೇ 7ನೇ ಸ್ಥಾನದಲ್ಲಿದೆ. ಆದರೆ, ಪ್ರವಾಸೋದ್ಯಮದ ಬೆಳವಣಿಗೆಗೆ ಸರ್ಕಾರದಿಂದ ಸೂಕ್ತ ಬೆಂಬಲ ಸಿಗುತ್ತಿಲ್ಲ’ ಎಂದು ಜಿಲ್ಲಾ ಟೆಲ್, ರೆಸಾರ್ಟ್ ಹಾಗೂ ಉಪಹಾರ ಗೃಹ ಸಂಘದ ಗೌರವಾಧ್ಯಕ್ಷ ನಾಗೇಂದ್ರ ಪ್ರಸಾದ್ ಸಲಹೆ ನೀಡಿದರು.

ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಿದ್ದಾಪುರದ ಇವಾಲ್ವ್ ಬ್ಯಾಕ್ ರೆಸಾರ್ಟ್‌ನಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಮಾತನಾಡಿದರು.

‘ಪ್ರವಾಸಿಗರಿಗೆ ನಮ್ಮ ನಾಡಿನ ಆಚಾರ ವಿಚಾರ, ಸಂಸ್ಕೃತಿ ಹಾಗೂ ಆಹಾರ ಪದ್ಧತಿ ಪರಿಚಯಿಸುವಂತಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ಪ್ರವಾಸೋಧ್ಯಮಕ್ಕೆ ಅನುವು ನೀಡಬಾರದು’ ಎಂದರು.

‘ಜಿಲ್ಲೆಯ ಸುಮಾರು 1.25 ಲಕ್ಷ ಮಂದಿ ಪ್ರವಾಸೋದ್ಯಮ ಅವಲಂಬಿಸಿದ್ದಾರೆ. ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಆಗಬೇಕು ಹಾಗೂ ಪಟ್ಟಣಗಳ ಟ್ರಾಫಿಕ್ ಸಮಸ್ಯೆ ನಿವಾರಿಸಿದರೆ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಕಿರಿ ಕಿರಿ ಉಂಟಾಗುವುದು ತಪ್ಪುತ್ತದೆ’ ಎಂದು ಅಭಿಪ್ರಾಯಪಟ್ಟರು.

ಕಂಟೆಂಟ್ ಕ್ರಿಯೇಟರ್ ಹಾಗೂ ಎವರ್ ಗ್ರೀನ್ ಕೌಂಟಿ ಮಾಲೀಕರಾದ ಬಜನ್ ಬೋಪಣ್ಣ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಎಸ್.ಎನ್.ಡಿ.ಪಿ ಅಧ್ಯಕ್ಷರಾದ ವಿ.ಕೆ ಲೊಕೇಶ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್ ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜೀರ ಅಯ್ಯಪ್ಪ, ಇವಾಲ್ವ್ ಬ್ಯಾಕ್ ರೆಸಾರ್ಟ್ ಪ್ರಧಾನ ವ್ಯವಸ್ಥಾಪಕ ಥೋಮಸ್ ಪೌಲ್ ಮಾತನಾಡಿದರು.

ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್, ಆರ್.ಸುಬ್ರಮಣಿ, ಎ.ಎಸ್ ಮುಸ್ತಫಾ, ಹೇಮಂತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.