ಮಡಿಕೇರಿಯ ಕೆಳಗಿನ ಗೌಡ ಸಮಾಜದ ಸಭಾಂಗಣದಲ್ಲಿ ಶುಕ್ರವಾರ ನಡೆದ ಯೋಗ ದಿನಾಚರಣೆಯಲ್ಲಿ ನೂರಾರು ಜನರು ಭಾಗವಹಿಸಿದ್ದರು
ಮಡಿಕೇರಿಯ ಕೆಳಗಿನ ಗೌಡ ಸಮಾಜದ ಸಭಾಂಗಣದಲ್ಲಿ ಶುಕ್ರವಾರ ನಡೆದ ಯೋಗ ದಿನಾಚರಣೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು
ಯಾವುದೇ ಗೊಂದಲವಿಲ್ಲದೇ ನಡೆದ ಕಾರ್ಯಕ್ರಮ ಬಂದಿದ್ದ ಎಲ್ಲರಿಗೂ ಉಪಾಹಾರದ ವ್ಯವಸ್ಥೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಎಸ್.ಪಿ. ಭಾಗಿ
ದೇಹ ಮತ್ತು ಮನಸ್ಸಿನ ನಡುವೆ ಸಮನ್ವಯ ಸಾಧಿಸಲು ಯೋಗಾಭ್ಯಾಸ ಅಗತ್ಯ. ಆರೋಗ್ಯವೇ ಭಾಗ್ಯವಾಗಿದ್ದು ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿ
ವೆಂಕಟ್ ರಾಜಾ ಜಿಲ್ಲಾಧಿಕಾರಿ.
ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆಗೆ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು ಹೀಗೆ ಎಲ್ಲರೂ ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಯಶಸ್ಸುಗೊಳಿಸಿದ್ದಾರೆ
ಡಾ.ರೇಣುಕಾದೇವಿ ಜಿಲ್ಲಾ ಆಯುಷ್ ಅಧಿಕಾರಿ.
ಅಚ್ಚರಿ ಮೂಡಿಸಿದ ಸಿಂಚನಾ ಮದೆನಾಡು
ಬಿಜಿಎಸ್ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಅವರು ಕಲಾತ್ಮಕ ಯೋಗ ಪ್ರದರ್ಶನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ದೇಹವನ್ನು ಬಿಲ್ಲಿನಂತೆ ಬಗ್ಗಿಸುತ್ತಾ ಮಾಡುತ್ತಿದ್ದ ಈಕೆಯ ಯೋಗ ಕಂಡು ಸಭಿಕರ ಅಕ್ಷರಶಃ ಅಚ್ಚರಿಗೊಂಡರು. ಕೆಲವೇ ಕೆಲವು ನಿಮಿಷಗಳ ವೇದಿಕೆಯ ಮೇಲೆ ನಡೆದ ಈ ಪ್ರದರ್ಶನ ಯೋಗದಿನಾಚರಣೆಗೆ ಮೆರುಗು ತಂದಿತು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಸಿಂಚನಾ ‘ನಾನು ಕಳೆದ 5 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದೇನೆ. ಕಳೆದೊಂದು ವರ್ಷದಿಂದ ಕಲಾತ್ಮಕ ಯೋಗವನ್ನು ಕಲಿಯುತ್ತಿದ್ದೇನೆ’ ಎಂದು ಹೇಳಿದರು.
ಕಾಣದ ಜನಪ್ರತಿನಿಧಿಗಳು ಜಿಲ್ಲಾಮಟ್ಟದ ಅಧಿಕಾರಿಗಳು!
ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕೊಡಗಿನ ಶಾಸಕರು ಯಾರೂ ಕಾಣಿಸಿಕೊಳ್ಳಲಿಲ್ಲ. ಜೊತೆಗೆ ಬಹುತೇಕ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಗೈರಾಗಿದ್ದರು. ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯಿತಿ ಸಿಇಒ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಒಂದೆರಡು ಇಲಾಖೆಗಳ ಅಧಿಕಾರಿಗಳನ್ನು ಬಿಟ್ಟರೆ ಹೆಚ್ಚಿನ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬರಲಿಲ್ಲ. ಕೆಲವು ಯೋಗ ಶಿಕ್ಷಣ ಸಂಸ್ಥೆಗಳು ಈ ಬಾರಿ ತಮ್ಮ ತಮ್ಮ ಶಿಕ್ಷಣ ಸಂಸ್ಥೆಗಳಲ್ಲೇ ಯೋಗ ದಿನಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸಿದ್ದರಿಂದ ನುರಿತ ಯೋಗಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಕಂಡು ಬರಲಿಲ್ಲ. ಆದರೆ ಶಾಲಾ ಮಕ್ಕಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕೊರತೆಯನ್ನು ನೀಗಿದರು.