ಮುಳಬಾಗಿಲು: ನಗರದ ಕೋಚಿಮುಲ್ ಶಿಬಿರ ಕಚೇರಿಯ ಸಭಾಂಗಣದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಿತು.

ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ‘ಐದು ವರ್ಷಗಳ ಹಿಂದೆ ಡಿಸಿಸಿ ಬ್ಯಾಂಕ್ ಬಗ್ಗೆ ಪ್ರತಿಯೊಬ್ಬರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಆದರೆ, ಇತ್ತೀಚೆಗೆ ನಾನಾ ಕಾರಣಗಳಿಂದ ಡಿಸಿಸಿ ಬ್ಯಾಂಕ್ ಅಧೋಗತಿಗೆ ಇಳಿದಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕೋಲಾರ ಡಿಸಿಸಿ ಬ್ಯಾಂಕ್ನಲ್ಲಿ ಅವ್ಯವಸ್ಥೆ ಹಾಗೂ ಅವ್ಯವಹಾರಗಳು ನಡೆದ ಕಾರಣ ಒಂದು ವರ್ಷದಿಂದ ರೈತರು ಹಾಗೂ ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರಿಂದ ಡಿಸಿಸಿ ಬ್ಯಾಂಕ್ನಿಂದ ಜನ ದೂರವಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಜಿಲ್ಲೆಯ ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರವು ₹52 ಕೋಟಿ ಸಹಾಯ ಧನ ನೀಡಬೇಕಿದೆ. ಬೆಳಗಾವಿಯಲ್ಲಿನ ಅಧಿವೇಶನದಲ್ಲಿ ಹಾಲಿನ ಬಾಕಿ ಹಣದ ಕುರಿತು ಪ್ರಸ್ತಾಪ ಮಾಡುತ್ತೇನೆ. ಹಾಲು ಉತ್ಪಾದಕರ ಸಹಾಯ ಧನ ಎಲ್ಲರಿಗೂ ತಲುಪುವಂತೆ ಮಾಡಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಕಾಡೇನಹಳ್ಳಿ ಕೆ. ಎನ್.ನಾಗರಾಜ್ ಮಾತನಾಡಿ, ಜವಾಹರ ಲಾಲ್ ನೆಹರೂ ಪಂಚವಾರ್ಷಿಕ ಯೋಜನೆ ಮತ್ತಿತರರ ಯೋಜನೆಗಳ ಜಾರಿ ಮೂಲಕ ಸಹಕಾರ ಕ್ಷೇತ್ರಗಳ ಅಭಿವೃದ್ಧಿಗೆ ಮುನ್ನುಡಿ ಹಾಡಿದ್ದರು ಎಂದರು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್. ರಾಜೇಂದ್ರ ಗೌಡ, ಆಲಂಗೂರು ಶಿವಣ್ಣ, ರಘುಪತಿ ರೆಡ್ಡಿ, ಬೈರೇಗೌಡ, ಕವಿತ, ಸುಬ್ರಮಣಿ, ಡಾ.ಕಿರಣ್, ಶ್ರೀರಾಮ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.