ಮುಳಬಾಗಿಲು: ನಗರದ ಡಿವಿಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಅದೇ ಶಾಲೆಯ ಶಿಕ್ಷಕಿಯರು ಶುಕ್ರವಾರ ಶಾಸಕ ಸಮೃದ್ಧಿ ಮಂಜುನಾಥ್ ಅವರಿಗೆ ದೂರು ನೀಡಿದರು.

ಮುಖ್ಯ ಶಿಕ್ಷಕರು ಶಾಲೆಯ ಮಹಿಳಾ ಸಿಬ್ಬಂದಿಯನ್ನು ಶೋಷಣೆ ಮಾಡುತ್ತಿದ್ದಾರೆ. ಬಹಿರಂಗವಾಗಿ ಹೀಯಾಳಿಸುತ್ತಾ, ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಐವರು ಶಿಕ್ಷಕಿಯರು ಶಾಸಕರ ಮುಂದೆ ಅಳಲು ತೋಡಿಕೊಂಡರು.

‘ನಾನು ಯಾರೊಂದಿಗಾದರೂ ಅಸಭ್ಯವಾಗಿ ವರ್ತಿಸಿದ್ದರೆ ಶಾಲೆಯ ಸಿಸಿಟಿವಿ ಕ್ಯಾಮೆರಾಗಳನ್ನು ಪರೀಕ್ಷಿಸಬಹುದು. ನನ್ನ ವಿರುದ್ಧ ಮಾಡಿರುವ ಆರೋಪ ಸುಳ್ಳು’ ಎಂದು ಮುಖ್ಯ ಶಿಕ್ಷಕ ಸೊಣ್ಣಪ್ಪ ಪ್ರತಿಕ್ರಿಯಿಸಿದ್ದಾರೆ.

ಡಿವಿಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಬಂದಿರುವ ದೂರುಗಳ ಆಧಾರದ ಮೇಲೆ ಜಿಲ್ಲಾ ಸಾರ್ವಜನಿಕ ಉಪ ನಿರ್ದೇಶಕರಿಗೆ ವರದಿ ಕಳುಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಗಂಗರಾಮಯ್ಯ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.