ಬಂಗಾರಪೇಟೆ: ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದಿರುವ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕೂಡಲೇ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಟಿ.ಎನ್. ರಾಮೇಗೌಡ ಒತ್ತಾಯಿಸಿದರು.

ಪಟ್ಟಣದ ಕೊಚಿಮುಲ್ ಶಿಬಿರ ಕಚೇರಿಯ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ತಾಲ್ಲೂಕಿನಾದ್ಯಂತ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯದರ್ಶಿಗಳಿಂದ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಯುತ್ತಿದೆ. ಇದರ ಬಗ್ಗೆ ಉಪ ಕಚೇರಿಯ ಅಧಿಕಾರಿಗಳಿಗೆ ಗೊತ್ತಿದ್ದರೂ ಏನೂ ಗೊತ್ತಿಲ್ಲದಂತೆ ಕಾರ್ಯದರ್ಶಿಗಳ ಜೊತೆಗೆ ಶಾಮೀಲಾಗಿ ಹಾಲು ಉತ್ಪಾದಕರಿಗೆ ಸೇರಬೇಕಾದ ಹಣವನ್ನು ಲೂಟಿ ಮಾಡುತ್ತಿದ್ದಾರೆ.

ತಾಲ್ಲೂಕಿನ ಐನೋರಹೊಸಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದಿರುವ ಪ್ರಕರಣವೇ ಇದಕ್ಕೆ ಸಾಕ್ಷಿ. ಕಾರ್ಯದರ್ಶಿ ಪ್ರಭಾಕರ್ ಹಾಲು ಉತ್ಪಾದಕರಿಗೆ ಸೇರಬೇಕಾದ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ, ಮಂಜುಳಾ ಹಾಗೂ ಪದ್ಮಾ ಎನ್ನುವವರ ಖಾತೆಗೆ ವರ್ಗಾಯಿಸಿದ್ದಾರೆ. ಇದು ಕೇವಲ 10 ತಿಂಗಳಲ್ಲಿ ನಡೆದ ಅವ್ಯವಹಾರವಾಗಿದ್ದು, ಉಳಿದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಯಬೇಕು. ಅಂಥವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ಮುರಳಿ, ಹಸಿರು ಸೇನೆ ಅಧ್ಯಕ್ಷ ಮುನಿಯಪ್ಪ, ಸದಸ್ಯರಾದ ರವಿ, ಶ್ರೀನಿವಾಸ್, ಕೃಷ್ಣಪ್ಪ, ದೇವರಾಜ್, ವಾಸಿಂ, ನಾರಾಯಣಗೌಡ, ಲಕ್ಷ್ಮಿಕಾಂತ್, ಮೋಹನ್,ಶ್ರೀನಿವಾಸ,ನಾರಾಯಣಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.