ಕೋಲಾರ: ರಾಜ್ಯ ಅಪೆಕ್ಸ್ ಬ್ಯಾಂಕ್‌ಗೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಅವರನ್ನು ರಾಜ್ಯ ಕಾಂಗ್ರೆಸ್ ಎಸ್ಟಿ ಘಟಕದ ವತಿಯಿಂದ ಇಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

‘2ನೇ ಬಾರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಗೋವಿಂದಗೌಡ ಅವರು ಆರ್ಥಿಕವಾಗಿ ದಿವಾಳಿಯಾಗಿದ್ದ ಬ್ಯಾಂಕನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಇದಕ್ಕೆ ಗೋವಿಂದಗೌಡರ ಶ್ರಮ ಕಾರಣ’ ಎಂದು ಘಟಕದ ಉಪಾಧ್ಯಕ್ಷ ಉಮಾಪತಿ ಅಭಿಪ್ರಾಯಪಟ್ಟರು.

‘ಡಿಸಿಸಿ ಬ್ಯಾಂಕ್ ಬಡ ರೈತರು ಹಾಗೂ ಮಹಿಳೆಯರಿಗೆ ಶೂನ್ಯ ಬಡ್ಡಿ ಸಾಲ ನೀಡುವ ಮೂಲಕ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಮನೆ ಮಾತಾಗಿದೆ. ಡಿಸಿಸಿ ಬ್ಯಾಂಕ್‌ನಿಂದ ಬಡ್ಡಿ ಮಾಫಿಯಾ ಹಾಗೂ ಖಾಸಗಿ ಲೇವಾದೇವಿದಾರರ ದೌರ್ಜನಕ್ಕೆ ಕಡಿವಾಣ ಬಿದ್ದಿದೆ. ಬ್ಯಾಂಕ್ ಲಕ್ಷಾಂತರಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡಿ ಜೀವನಾಧಾರ ಒದಗಿಸಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಬ್ಯಾಂಕ್ ಆಡಳಿತ ಮಂಡಳಿಯು ಜಿಲ್ಲೆಯಲ್ಲಿ ಈಗಾಗಲೇ ಎಸ್ಟಿ ಸಮುದಾಯದ ಸಾವಿರಾರು ಮಂದಿಗೆ ಸಾಲ ವಿತರಿಸುವ ಮೂಲಕ ಸಮುದಾಯಕ್ಕೆ ನೆರವಾಗಿದೆ. ಗೋವಿಂದಗೌಡ ಅವರು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿರುವುದರಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಮತ್ತಷ್ಟು ರೈತರು, ಮಹಿಳೆಯರು, ಬಡವರಿಗೆ ಹೆಚ್ಚಿನ ಸಾಲ ಸೌಲಭ್ಯ ಸಿಗಲಿದೆ’ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಮುಖಂಡರಾದ ನರಸಿಂಹ, ಬಾಬು, ರಮೇಶ್, ಶ್ಯಾಮ್, ಲಕ್ಷ್ಮಣ್, ನಿವೃತ್ತ ಮುಖ್ಯ ಶಿಕ್ಷಕ ನರಸಿಂಹಯ್ಯ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.