ಬಂಗಾರಪೇಟೆ: ಮಂಡ್ಯದಲ್ಲಿ ಡಿಸೆಂಬರ್ 20, 21 ಮತ್ತು 22 ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡದ ತೇರಿಗೆ ಶುಕ್ರವಾರ ಅದ್ದೂರಿ ಸ್ವಾಗತ ನೀಡಲಾಯಿತು.

ತಾಲ್ಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲ್ಲೂಕಿನ ಹುದುಕುಳ ಗ್ರಾಮದಲ್ಲಿ ಕನ್ನಡದ ರಥವನ್ನು ಸ್ವಾಗತಿಸಲಾಯಿತು.

ನಗರದ ಪಂಡಿತ ಹುದುಕುಳ ಗ್ರಾಮದಿಂದ ಪಟ್ಟಣದ ಕೋಲಾರ ಮುಖ್ಯ ರಸ್ತೆಯಲ್ಲಿ ಸಾಗಿದ ರಥ, ಅಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕುವೆಂಪು ವೃತ್ತದಿಂದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಪೂರ್ಣಕುಂಭ ಹೊತ್ತ ಮಹಿಳೆಯರು ಮತ್ತು ಶಾಲಾ ಕಾಲೇಜಿನ ಮಕ್ಕಳು ವಾದ್ಯವೃಂದವರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮೆರವಣಿಯೆಲ್ಲಿ ಪಾಲ್ಗೊಂಡಿದ್ದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಗೌಡ, ತಹಶೀಲ್ದಾರ ವೆಂಕಟೇಶಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್. ರವಿ ಕುಮಾರ, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ಪುರಸಭೆ ಅಧ್ಯಕ್ಷ ಎಂ. ಗೋವಿಂದ, ಇನ್ಸ್ಪೆಕ್ಟರ್ ಆರ್ ದಯಾನಂದ, ಹಿರಿಯ ಸಹಾಯಕ ನಿರ್ದೇಶಕ ಶಿವಾರೆಡ್ಡಿ, ಸಹಾಯಕ ನಿರ್ದೇಶಕರಾದ ಪ್ರತಿಭಾ, ಅಂಜಲಿದೇವಿ, ಶ್ರೀನಿವಾಸ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುನಿರಾಜು, ಪುರಸಭೆ ಸದಸ್ಯರಾದ ಷಫೀ, ಸುಹೇಲ್, ವಸಂತ್, ಕುಂಬಾರಪಾಳ್ಯ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕಾಧ್ಯಕ್ಷ ಸಂಜೀವಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಪ್ಪಯ್ಯಗೌಡ, ತಾಲ್ಲೂಕು ಅಧ್ಯಕ್ಷ ಆಂಜನೇಯ ಗೌಡ, ರವಿ, ಕಣಿಂಬೆಲೆ ರಾಮ್ಪ್ರಸಾದ್ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.