ಕೆರೆಗಳ ಅಭಿವೃದ್ಧಿಯಿಂದ ಕೃಷಿ ಪ್ರಾಣಿ–ಪಕ್ಷಿಗಳಿಗೆ ನೀರು ಆಹಾರ ಮೀನುಗಾರಿಕೆ ಮತ್ತು ಪ್ರವಾಸೋದ್ಯಮಕ್ಕೂ ಅನುಕೂಲವಾಗುತ್ತದೆ. ಆದರೆ ಜನಪ್ರತಿನಿಧಿಗಳಾಗಲಿ ಅಥವಾ ಅಧಿಕಾರಿಗಳಾಗಲಿ ಕೆರೆಗಳ ಪುನಃಶ್ಚೇತನಕ್ಕೆ ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ.
ಚಂದ್ರಶೇಖರ ರೈತ ಕೇತಗಾನಹಳ್ಳಿ
ಕೆರೆಯಲ್ಲಿ ತುಂಬಿಕೊಂಡಿರುವ ಹೂಳನ್ನು ತೆಗೆಯಬೇಕು. ಕೆರೆಗೆ ಸುತ್ತಲೂ ಕಟ್ಟೆ ನಿರ್ಮಿಸಬೇಕು. ಇದರಿಂದ ಅಂತರ್ಜಲ ಮಟ್ಟ ವೃದ್ಧಿ ಮತ್ತು ಸಂರಕ್ಷಣೆಯಾಗಲಿದೆ.
ಮಂಜುಳಾ ಶ್ರೀನಿವಾ ಅಧ್ಯಕ್ಷೆ ಗ್ರಾಮ ಪಂಚಾಯಿತಿ
ರೈತರ ಹಿತ ಕಾಯುವ ದೃಷ್ಟಿಯಿಂದ ಕೇತಗಾನಹಳ್ಳಿ ಗ್ರಾಮದ ದೊಡ್ಡಕೆರೆಯನ್ನು ಅಭಿವೃದ್ಧಿಪಡಿಸಲು ಮುಂದಾಗುತ್ತೇನೆ. ಈ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ತರಲಾಗುವುದು
ಎಸ್.ಎನ್. ನಾರಾಯಣಸ್ವಾಮಿ ಶಾಸಕ
ಪೂರ್ವಿಕರು ಒಂದು ಕೆರೆಯಿಂದ ಮತ್ತೊಂದು ಕೆರೆಗೆ ರಾಜಕಾಲುವೆಗಳ ಮೂಲಕ ನೀರಿನ ಸಂಪರ್ಕ ಕಲ್ಪಿಸಿದ್ದರು. ಈಗ ರಾಜಕಾಲುವೆಗಳು ಒತ್ತುವರಿ ಆಗಿವೆ. ಇದರಿಂದ ಮಳೆಯ ನೀರು ಕೆರೆಗಳಿಗೆ ಹರಿಯುತ್ತಿಲ್ಲ. ಮತ್ತೊಂದೆಡೆ ಒತ್ತುವರಿಯಿಂದ ಕೆರೆ ಹಾಗೂ ರಾಜಕಾಲುವೆಗಳ ಮೂಲ ಸ್ವರೂಪವೇ ಬದಲಾಗಿದೆ
ರವಿ ಕುಮಾರ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ
ಗ್ರಾಮದ ದೊಡ್ಡ ಕೆರೆ ತುಂಬಿ ಕಾಮಸಮುದ್ರ ವೃಷಭಾವತಿ ಕೆರೆಗೆ ನೀರು ಹರಿಯುತ್ತಿತ್ತು. ಆದರೆ ಇಂದು ಕೆರೆಯ ಕಟ್ಟೆ ಒಡೆದುಹೋಗಿದ್ದರಿಂದ ನೀರು ಸಂಗ್ರಹಣೆ ಆಗುತ್ತಿಲ್ಲ.
ಚಂದ್ರಶೇಖರ ಬಿಇಎಂಎಲ್ ನಿವೃತ್ತ ನೌಕರ
ಪ್ರತಿ ಕೆರೆಯು ಸುತ್ತಲಿನ ಗ್ರಾಮಗಳಿಗೆ ಜೀವಾಳವಿದ್ದಂತೆ. ಕೆರೆಗಳು ಉಳಿದರೆ ಮಳೆ ನೀರು ಸಂಗ್ರಹಣೆ ಸಾಧ್ಯ. ಅಂತರ್ಜಲ ಮಟ್ಟ ಕಾಪಾಡಲು ಸಹಕಾರಿ. ಕೆರೆಗಳ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಸಣ್ಣ ನೀರಾವರಿ ಇಲಾಖೆ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಮುಂದಾಗುತ್ತಿಲ್ಲ.
ಮಂಜುನಾಥ. ಕೆ.ವಿ ಗ್ರಾಮ ಪಂಚಾಯಿತಿ ಸದಸ್ಯ
ಅಮೃತಸರ ಯೋಜನೆ ಅಡಿ ಗ್ರಾಮದ ದೊಡ್ಡಕೆರೆಯನ್ನು ಪುನಃಶ್ಚೇತನ ಮಾಡಿ ಅಭಿವೃದ್ಧಿ ಪಡಿಸಬೇಕು. ಈ ಮೂಲಕ ನೀರಿನ ಸಂಗ್ರಹ ಮಾಡಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಲಿದೆ