ಬಂಗಾರಪೇಟೆ: ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಜಾನುಗುಟ್ಟೆ ವೃತ್ತದಲ್ಲಿ ಬಂಗಾರಪೇಟೆಯಿಂದ ಕಾಮಸಮುದ್ರವರೆಗಿನ ₹20 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿಗೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಭಾನುವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ‘ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಜನರ ಸಂಕಷ್ಟಗಳಿಗೆ ನೆರವಾಗಿದೆ. ಆದರೆ, ಇದನ್ನು ಬಿಜೆಪಿ–ಜೆಡಿಎಸ್‌ಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಬಡವರು, ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮತ್ತು ಶೋಷಿತ ವರ್ಗದ ಮಹಿಳೆಯರ ಪರವಾಗಿ ಇರುವುದು ಹಾಗೂ ದಲಿತ, ಹಿಂದುಳಿದ ಅಲ್ಪಸಂಖ್ಯಾತ ನಾಯಕರು ಅಧಿಕಾರ ನಡೆಸುವುದನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೃಷಿ, ಹೈನುಗಾರಿಕೆ, ಆರೋಗ್ಯ, ನೀರಾವರಿ, ಶೈಕ್ಷಣಿಕ, ವೈಜ್ಞಾನಿಕ ಕ್ಷೇತ್ರದಲ್ಲಿ ಗಣನೀಯವಾಗಿ ಸುಧಾರಣೆಯಾಗಿದೆ. ಜೊತೆಗೆ ಮೂಲ ಸೌಲಭ್ಯ ಒದಗಿಸುವುದು ಸೇರಿದಂತೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ’ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಬಂಗಾರಪೇಟೆ ಪಟ್ಟಣವನ್ನು ಮಾದರಿ ನಗರವಾಗಿ ರೂಪಿಸಲಾಗುವುದು. ಜೊತೆಗೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವಿ. ನಾಗರಾಜ್ ಮಾತನಾಡಿ, ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷವಾಗಿದೆ. ಗೃಹಲಕ್ಷ್ಮಿ ಹಣವು ಕೆಲವರಿಗೆ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದೆ. ಇನ್ನೂ ಕೆಲವರಿಗೆ ರೆಫ್ರಿಜರೇಟರ್, ಟಿ.ವಿ ಖರೀದಿಸುವ ಕನಸನ್ನು ಈಡೇರಿಸಿದೆ. ಬಡವರಿಗೆ ಬದುಕು ಕಟ್ಟಿಕೊಳ್ಳಲೂ ಅನುಕೂಲವಾಗಿದೆ ಎಂದರು.

ಈ ವೇಳೆ ಪುರಸಭೆ ಅಧ್ಯಕ್ಷ ಗೋವಿಂದ ಎಂ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಕೆ. ನಾರಾಯಣಸ್ವಾಮಿ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಟಿ. ರಂಗನಾಥ ನಾಯ್ಡು, ಮಹದೇವ, ಸಮಾಜ ಸೇವಕ ಚಿಕ್ಕವಲಗಮಾದಿ ಮುನಿರಾಜ್, ಬೋಡೆನಹಳ್ಳಿ ಲಕ್ಷಿನಾರಾಯಣ ಪ್ರಸಾದ್, ಪೊಲೀಸ್ ವೃತ್ತ ನಿರೀಕ್ಷಕ ನಾರಾಯಣಸ್ವಾಮಿ, ಉಪ ನಿರೀಕ್ಷಕ ಕಿರಣ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಕೆ. ಜಯಣ್ಣ, ಪ್ರಭಾಕರ್ ರೆಡ್ಡಿ, ರಾಮಶೆಟ್ಟಿ, ಸದಸ್ಯರಾದ ಮುನಿರಾಪ್ಪ, ಶ್ರೀನಿವಾಸ, ಹಂಸಾನಂದ, ಚಿಕ್ಕಹೊಸಹಳ್ಳಿ ಮಂಜುನಾಥ್ ಗೌಡ, ಮಹಾಲಕ್ಷ್ಮಿ, ಲಕ್ಷ್ಮಮ್ಮ, ಭಾಸ್ಕರ್, ರಂಗಚಾರಿ, ವೆಂಕಟೇಶ್, ಮಿಟ್ಟಹಳ್ಳಿ ವರದರಾಜ್, ಶಿವ ಕುಮಾರ, ಲೋಕೋಪಯೋಗಿ ಅಧಿಕಾರಿಗಳಾದ ರಾಮಮೂರ್ತಿ, ರವಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.