ಮಾಲೂರು: ರಾಜಕಾರಣದಲ್ಲಿ ಭಿನ್ನಾಭಿಪ್ರಾಯ ಸಹಜ. ಆದರೆ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಒಗ್ಗಟ್ಟಾಗಿ ಕರೆದೊಯ್ಯುವ ಕೆಲಸ ಮಾಡಿದಾಗ ಮಾತ್ರ ಪಕ್ಷ ಸಂಘಟನೆ ಆಗುತ್ತದೆ ಎಂದು ಮಾಜಿ ಸಂಸದ ಕೆಎಚ್ ಮುನಿಯಪ್ಪ
ಹೇಳಿದರು.

ಪಟ್ಟಣದಲ್ಲಿ ಭಾನುವಾರ ತಮ್ಮ ಬೆಂಬಲಿಗರು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದಲ್ಲಿ ಏನೇ ತೀರ್ಮಾನಗಳಾದರೂ ಸಹ ಎಲ್ಲರೊಂದಿಗೆ ಚರ್ಚಿಸಿಯೇ ತೀರ್ಮಾನಿಸಬೇಕು ಎಂದರು.

ಮಾಜಿ ಶಾಸಕ ಎ.ನಾಗರಾಜು ಮಾತನಾಡಿ, ‘ರಾಜಕಾರಣ ಶಾಶ್ವತವಲ್ಲ. ಈಗಿನ ಕಾಂಗ್ರೆಸ್ ಶಾಸಕರು ಹಳೆ ಕಾಂಗ್ರೆಸ್ಸಿಗರನ್ನು ಹಾಗೂ ಹೊಸ ಕಾಂಗ್ರೆಸಿಗರನ್ನು ಒಗ್ಗಟ್ಟಾಗಿ ಕರೆದೊಯ್ಯುವ ಕೆಲಸ ಮಾಡಬೇಕು’ ಎಂದು ಹೇಳಿದರು.

ವಕೀಲ ಕೆ.ಎಚ್.ಸೋಮಶೇಖರ್ ಮಾತನಾಡಿ, ‘ತಾಲೂಕಿನಲ್ಲಿ ಕಾಂಗ್ರೆಸ್‌ನಲ್ಲಿ ಸಾಮಾಜಿಕ ನ್ಯಾಯವಿಲ್ಲ. ಹಳೆ ಕಾಂಗ್ರೆಸ್ಸಿಗರಿಗೆ ಬೆಲೆ ಸಿಗುತ್ತಿಲ್ಲ. ಪಕ್ಷದ ವರಿಷ್ಠರು ಹಳೆ ಕಾಂಗ್ರೆಸಿಗರಿಗೆ ಅವಕಾಶ ಕಲ್ಪಿಸಬೇಕು’ ಎಂದರು

ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಲಿಂಗಾರೆಡ್ಡಿ, ಶ್ರೀನಿವಾಸ್, ಜಿ.ಪಂ ಮಾಜಿ ಸದಸ್ಯ ಎಂ. ನಾರಾಯಣಸ್ವಾಮಿ, ಚಿಂತಾಮಣಿ ಜಿ.ನಾರಾಯಣಸ್ವಾಮಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೈಲಂಡಳ್ಳಿ ಮುನಿರಾಜು, ಡಿಸಿಸಿ ಉಪಾಧ್ಯಕ್ಷ ಸಂ. ನಾರಾಯಣಸ್ವಾಮಿ, ಕಾರ್ಗಿಲ್ ವೆಂಕಟೇಶ್, ಎಂ.ಆರ್. ರಂಗಪ್ಪ, ಅಶೋಕ್, ಬಿ.ವೈ. ಲೋಕೇಶ್, ಮಹಾಲಕ್ಷ್ಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.