ಮುಳಬಾಗಿಲು (ಕೋಲಾರ): ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಬೈರಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಮಹಿಳೆಯೊಬ್ಬರು ಶನಿವಾರ ಮೃತಪಟ್ಟಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ಅಪ್ಪಿಕೊಂಡೇನಹಳ್ಳಿ ಗ್ರಾಮದ ಅರುಣಮ್ಮ (35) ಚಿಕಿತ್ಸೆ ಸಿಗದೆ ಮೃತಪಟ್ಟ ಮಹಿಳೆ. ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಹಿಳೆಯನ್ನು ಸಮೀಪದ ಬೈರಕೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಹೊರರೋಗಿಗಳ ವಿಭಾಗ (ಒಪಿಡಿ) ತೆರೆದಿದ್ದರೂ ವೈದ್ಯರು ಇರಲಿಲ್ಲ.

ಅಲ್ಲಿದ್ದ ನರ್ಸ್ ಹಾಗೂ ಸಿಬ್ಬಂದಿ ಮಹಿಳೆಯನ್ನು ಆಂಬುಲೆನ್ಸ್ನಲ್ಲಿ ಮಲಗಿಸಿ ಉಸಿರಾಟ ಹಾಗೂ ನಾಡಿ ಬಡಿತ ಪರೀಕ್ಷೆ ಮಾಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ನಲ್ಲಿ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ಕಳಿಸಿದ್ದಾರೆ. ಮಾರ್ಗ ಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ.

ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆದಲ್ಲಿಯೇ ಮಹಿಳೆ ಮೃತಪಟ್ಟಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಸುಗುಣ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.